ಬ್ರೇಕಿಂಗ್ ನ್ಯೂಸ್
22-06-21 05:30 pm Mangalore Correspondent ಕ್ರೈಂ
ಮಂಗಳೂರು, ಜೂ.22: ಫೇಸ್ ಬುಕ್ ಮೂಲಕ ಪರಿಚಯವಾದ ಆಗಂತುಕ ವ್ಯಕ್ತಿಯೊಬ್ಬರಿಗೆ 1.15 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೂರು ನೀಡಿರುವ ವ್ಯಕ್ತಿಯ ಫೇಸ್ ಬುಕ್ ಖಾತೆಗೆ 'ನೆಲ್ಸನ್ ಮಾರ್ಕ್' ಹೆಸರಿನ ಅಪರಿಚಿತ ವ್ಯಕ್ತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಬಳಿಕ ಆತ ಫೇಸ್ ಬುಕ್ ಮುಖಾಂತರ ಸಂದೇಶ ವಿನಿಮಯ ಮಾಡುತ್ತಿದ್ದ. ಅದೇ ಸಂದರ್ಭ ಆತ ಇವರ ವಾಟ್ಸ್ ಆ್ಯಪ್ ನಂಬರ್ ಪಡೆದುಕೊಂಡು, ನೀವು ನನ್ನ ಒಳ್ಳೆಯ ಸ್ನೇಹಿತ, ನಿಮಗೆ ನಾನು ಸ್ವಲ್ಪ ಹಣವನ್ನು ಕೊಡಲು ಇಚ್ಛಿಸುತ್ತೇನೆ ಎಂದು ನಂಬಿಸಿ ಬ್ಯಾಂಕ್ ಖಾತೆ ವಿವರ ಪಡೆದುಕೊಂಡಿದ್ದ.

ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಿರುವುದಾಗಿ ತಿಳಿಸಿ, ಒಂದು ಡೆಪಾಸಿಟ್ ಸ್ಲಿಪ್ ಕಳುಹಿಸಿಕೊಟ್ಟಿರುವುದಾಗಿ ನಂಬಿಸಿದ್ದಾನೆ. ಆದರೆ, ಹಣ ಪಡೆಯಬೇಕಾದಲ್ಲಿ ಆದಾಯ ತೆರಿಗೆಯನ್ನು ನೀವು ಪಾವತಿಸಬೇಕೆಂದು ತಿಳಿಸಿದ್ದಾನೆ. ಅದನ್ನು ನಂಬಿ, ಆರೋಪಿ ಕಳುಹಿಸಿಕೊಟ್ಟ ದೆಹಲಿಯ ಇಂಡಿಯನ್ ಬ್ಯಾಂಕ್ ನ ಖಾತೆಗೆ 2021 ಏಪ್ರಿಲ್ 21 ರಂದು ಹಂತ ಹಂತವಾಗಿ 1,15,000 ರೂ. ಡೆಪಾಸಿಟ್ ಮಾಡಿದ್ದಾರೆ.
ಯಾರೋ ಗುರುತು ಪರಿಚಯ ಇಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿ ಕಷ್ಟಪಟ್ಟು ದುಡಿದ ಹಣವನ್ನು ನಿಮಿಷದಲ್ಲೇ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
Mangalore Man loses 1.15 lakhs on Facebook by accepting unknown friend requests. A case has been registered at the cybercrime police station in Pandeshwar.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 11:31 pm
HK News Desk
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
27-09-26 08:06 pm
HK News Staffer
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am