ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್‌ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್‌ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.
15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm