ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್‌ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm