ಬ್ರೇಕಿಂಗ್ ನ್ಯೂಸ್
29-06-21 04:11 pm Mangalore Correspondent ಕ್ರೈಂ
ಮಂಗಳೂರು, ಜೂನ್ 29: ಮಂಗಳೂರಿನ ಸಿಸಿಬಿ ಪೊಲೀಸರು ಎರಡು ಪ್ರತ್ಯೇಕ ಗಾಂಜಾ ಮಾರಾಟ ಪ್ರಕರಣಗಳಲ್ಲಿ ನಗರದ ಮಿಶನ್ ಸ್ಟ್ರೀಟ್ ಮತ್ತು ಅತ್ತಾವರದ ಮಾರ್ನಮಿಕಟ್ಟೆ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಒಬ್ಬ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಬಂದರು ಮಿಶನ್ ಸ್ಟ್ರೀಟ್ ನಲ್ಲಿ ಹೋಂಡಾ ಆಕ್ಟಿವಾ ಮೋಟರ್ ಸೈಕಲ್ ನಲ್ಲಿ ಗಾಂಜಾ ಸಾಗಿಸುತ್ತಿದ್ದ ತೋಟ ಬೆಂಗ್ರೆ ನಿವಾಸಿ ಅಬ್ದುಲ್ ರಹಿಮಾನ್ ಮತ್ತು ಬಂದರು ನಿವಾಸಿ ಸಾದಿಕ್ ಎಂಬವರನ್ನು ಪೊಲೀಸರು ಬಂಧಿಸಿ, ಅವರಿಂದ ಎರಡು ಕೆಜಿ 275 ಗ್ರಾಮ್ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮಾರ್ನಮಿಕಟ್ಟೆ ಎಂಬಲ್ಲಿ ಇನೋವಾ ಕಾರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಜೈ ನಿವಾಸಿ ಮಹಮ್ಮದ್ ಅಮೀನ್, ಫಳ್ನೀರ್ ನಿವಾಸಿ ರೋಶನ್ ಯೂಸುಫ್, ಬಂದರು ನಿವಾಸಿ ಮಹಮ್ಮದ್ ಅಫ್ವಾನ್ ಎಂಬವರನ್ನು ಬಂಧಿಸಿದ್ದು, ಅವರಿದೆ 2 ಕೇಜಿ 160 ಗ್ರಾಮ್ ಗಾಂಜಾ ಹಾಗೂ 9 ಎಂಡಿಎಂಎ ಪಿಲ್ಸ್, ರಡು ಗ್ರಾಮ್ ಬ್ರೌನ್ ಶುಗರ್ ಹಾಗೂ ಇನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಇದೇ ವೇಳೆ, ಅತ್ತಾವರದ ಫ್ಲಾಟ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಬೀದರ್ ಮೂಲದ ಪ್ರಜ್ವಲ್, ಬೋಳಾರದ ತಮೀಮ್, ಬಂದರಿನ ಅಬ್ದುಲ್ ಅರ್ಮಾನ್, ಜೆಪ್ಪು ನಿವಾಸಿ ಅಫ್ವನ್ ಹಾಗೂ ಮೊಹಮ್ಮದ್ ರಾಯಿಸ್ ಎಂಬವರನ್ನು ಬಂಧಿಸಿದ್ದಾರೆ. ಇವರಲ್ಲಿದ್ದ ಒಂದು ಕೇಜಿ ಗಾಂಜಾ ಮತ್ತು ಮೂರು ಮೋಟಾರ್ ಸೈಕಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಎರಡೂ ಪ್ರಕರಣಗಳಲ್ಲಿ ಒಡಿಶಾ ರಾಜ್ಯದಿಂದ ಬೆಂಗಳೂರಿನ ಮೂಲಕ ಮಂಗಳೂರಿಗೆ ಗಾಂಜಾ ಮತ್ತಿತರ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿದ್ದು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಪೂರೈಕೆ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪಾಂಡೇಶ್ವರದ ಇಕನಾಮಿಕ್ ಮತ್ತು ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore City police arrested eight people in two separate cases of drug peddling and seized ganja and MDMA from their possession on Tuesday, June 29. Two accused were arrested from Mission Street. The arrested are Abdul Rehman and Sadiq from Bengre. As much as 2.275 kg of ganja and a Honda Activa scooter was seized from them.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm