ಕೊಳ್ನಾಡು ; ಹಳೆ ದ್ವೇಷದಲ್ಲಿ ಯುವಕನಿಗೆ ಹಲ್ಲೆ, ಚೂರಿ ಇರಿತ 

04-07-21 01:24 pm       Mangaluru Correspondent   ಕ್ರೈಂ

ಹಳೆ ದ್ವೇಷದಲ್ಲಿ  ಯುವಕನೊಬ್ಬನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ.

ಬಂಟ್ವಾಳ, ಜುಲೈ 4: ಹಳೆ ದ್ವೇಷದಲ್ಲಿ  ಯುವಕನೊಬ್ಬನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಹಲ್ಲೆಗೊಳಗಾದ ಯುವಕನಾಗಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾನೆ.

ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ಪೊಲೀಸರಿಗೆ ದೂರು ನೀಡಿದ್ದಾರೆ.

A group of four people allegedly stabbed a man at Kadumath of Kolnadu village under the limits of Vittal police station here on the night of Saturday June 3.The injured youth has been identified as Abdul Harris (29).