ಬ್ರೇಕಿಂಗ್ ನ್ಯೂಸ್
17-07-21 10:13 pm Headline Karnataka News Network ಕ್ರೈಂ
ಬೆಂಗಳೂರು, ಜು. 17: ಸುಮಾರು ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ಇಬ್ಬರ ಬಂಧನ ಇಬ್ಬರು ಆರೋಪಿಗಳನ್ನು ಸುದ್ದುಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಇರ್ಫಾನ್ ಮತ್ತು ಥಾರಿಂ ಬಂಧಿತ ಆರೋಪಿಗಳು. ಇವರಿಂದ ಎರಡು ಕೋಟಿ ಮೌಲ್ಯದ ಹ್ಯಾಶಿಷ್ ಆಯಿಲ್ ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಈ ಮಾದಕ ವಸ್ತುವನ್ನು ಬೆಂಗಳೂರಿಗೆ ರವಾನಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶರಾಮಿ ಜೀವನ ಸಾಗಿಸುತ್ತಿದ್ದರು. ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಕೋಟ್ಯಂತರ ಬೆಲೆ ಬಾಳುವ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.
ಕೋಣನಕುಂಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ಸೇಮಂತ, ಸಿದಾರಿ ಬೊಂಜಿ ಬಾಬು, ವಂತಲ ನಾಗೇಶ್, ಸಿದಾರಿ ಮಹೇಶ್ ಬಂಧಿತ ಆರೋಪಿಗಳು. ನಾಲ್ವರಿಂದ ಒಟ್ಟು 134 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸೇಮಂತ ಎಂಬಾತ ಕಾರಿನಲ್ಲಿ 41 ಕೆ.ಜಿ. ಗಾಂಜಾ ಮಾರಾಟ ಮಾಡಲು ಯತ್ನಿಸಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈತನಿಂದ 41 ಕೆ.ಜಿ. ಗಾಂಜಾ ಸಿಕ್ಕಿದ್ದು, ಈತ ನೀಡಿದ ಮಾಹಿತಿಮೇರೆಗೆ ಇತರೆ ಮೂವರು ಆರೋಪಿಗಳನ್ನು ಲಾಡ್ಜ್ ನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 93 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರು ಮಾದಕ ವ್ಯಸನಿಗಳ ತವರೂರಾರಿ ಪರಿವರ್ತನೆಯಾಗುತ್ತಿದೆ. ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ 2 ಸಾವಿರ ಕೆ.ಜಿ. ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನೇ ಪತ್ತೆ ಮಾಡಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚು ಮಾದಕ ವಸ್ತು ಪರಕರಣಗಳೇ ದಾಖಲಾಗುತ್ತಿವೆ. ಬಹುತೇಕ ಪ್ರಕರಣಗಳ ಗಾಂಜಾ ಮೂಲ ಆಂಧ್ರ ಪ್ರದೇಶ ಎಂಬುದು ದೃಢಪಟ್ಟಿದೆ. ಪೊಲೀಸರು ಸತತ ಪ್ರಕರಣ ದಾಖಲಿಸುತ್ತಿರುವ ನಡುವೆಯೂ ಗಾಂಜಾ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
The Central Crime Branch (CCB) of Bangalore have arrested two drug peddlers in Bengaluru and seized 1.3 litres of hashish oil and two kilograms of ganja worth Rs 12 lakh.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm