ಬ್ರೇಕಿಂಗ್ ನ್ಯೂಸ್
21-07-21 05:27 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಕಡಿಯಲು ರೆಡಿ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಲಾಗಿದೆ.
ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ. ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
MCC and Police raid on Kudroli Slaughter house in Mangalore on bakrid. Two young cows rescued and one person has been arrested.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am