ಬ್ರೇಕಿಂಗ್ ನ್ಯೂಸ್
22-07-21 10:02 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 22: ಉದ್ಯಮಿ ಮುಸ್ತಫಾ ರಾಜ್ ಹಾಗೂ ನಟಿ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ. ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನು ಪ್ರಕಾರ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು ಎಂದು ಆಯೆಷಾ ಹೇಳಿದ್ದಾರೆ.
ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಹಾಗಾಗಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯವಾಗಿದೆ. ಪ್ರಿಯಾಮಣಿ ಅವರನ್ನು ಮದುವೆಯಾಗುವ ವೇಳೆ ತಾವು ಬಾಚ್ಯುಲರ್ ಎಂದು ಕೋರ್ಟ್‌ನಲ್ಲಿ ಮುಸ್ತಫಾ ರಾಜ್ ಹೇಳಿಕೊಂಡಿದ್ದರು ಎಂದು ಮುಸ್ತಫಾ ರಾಜ್ ಮೊದಲ ಪತ್ನಿ ಆಯೆಷಾ ಹೇಳಿದ್ದಾರೆ.
ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
Priyamani and her husband Mustafa Raj have been slapped with a criminal case. According to reports, Mustafa's first wife Ayesha has slapped the criminal case against them alleging that Mustafa has not separated from her legally till date and hence his marriage with Priyamani is illegal. Mustafa had reportedly married Ayesha with whom he has two kids. His first wife has alleged that his and Priyamani's marriage is invalid as she is still married to him.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm