ಬ್ರೇಕಿಂಗ್ ನ್ಯೂಸ್
23-07-21 01:03 pm Headline Karnataka News Network ಕ್ರೈಂ
ಕಾಸರಗೋಡು, ಜು.23: ಮನೆಯಲ್ಲಿ ಅಸೌಖ್ಯದಿಂದ ಮಲಗಿದ್ದ ಗಂಡನನ್ನು ಪತ್ನಿಯೇ ಕೊಲೆಗೈದ ಘಟನೆ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಜಾನಕಿ, ಸಂಬಂಧಿಕರಾದ ವಿ.ರಾಜೇಶ್ ಹಾಗೂ ಅನಿಲ್ ಎಂಬಾತನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕುಂಞಂಬು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದ್ದರು. ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತೆ ಅಂತ ಬುಧವಾರ ತಡರಾತ್ರಿ ಕೊಲೆ ನಡೆಸಿರುವುದಾಗಿ ಬಂಧಿತರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.

ಬುಧವಾರ ರಾತ್ರಿ ಸ್ಥಳೀಯ ಆ್ಯಂಬುಲೆನ್ಸ್ ಚಾಲಕರೊಬ್ಬರಿಗೆ ಅನಾಮಧೇಯ ಕರೆ ಬಂದಿತ್ತು. ಮಡಿವಯಲ್ ನಲ್ಲಿ ವ್ಯಕ್ತಿಯೋರ್ವರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ತಲಪಿಸುವಂತೆ ತಿಳಿಸಿದ್ದ. ಬಳಿಕ ಆ್ಯಂಬುಲೆನ್ಸ್ ಚಾಲಕ ಅದೇ ನಂಬರ್ ಗೆ ಮರಳಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡು ಪರಿಸರದ ನಿವಾಸಿಗಳಿಗೆ ಮಾಹಿತಿ ನೀಡಿದ್ದ. ಸ್ಥಳೀಯರು ವಿಚಾರಿಸಿದಾಗ ಕುಂಞಂಬು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಆದರೆ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಹಾಗೂ ನೆಲದಲ್ಲಿ ರಕ್ತದ ಕಲೆಗಳು ಕಂಡುಬಂದಿತ್ತು. ಈ ಬಗ್ಗೆ ಮೃತರ ಪತ್ನಿ ಜಾನಕಿಯನ್ನು ಪ್ರಶ್ನಿಸಿದಾಗ ಮಂಚದಿಂದ ಬಿದ್ದು ಗಾಯಗೊಂಡಿರುವುದಾಗಿ ತಿಳಿಸಿದ್ದಳು. ಸ್ಥಳೀಯರು ಚಂದೇರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಕುಂಞಂಬು ಮನೆಗೆ ಬುಧವಾರ ರಾತ್ರಿ ಇಬ್ಬರು ಆಗಮಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಜಾನಕಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
Wife and three others kill husband infected with Covid 19 disease in Kasaragod. The incident happened at Pilikkod Madivayal within Chandera police station limits. Kunhambu (66) from Madivayal was murdered in this case. His wife Janaki, and relatives V Rajesh and Anil, have been arrested. The police, who took the trio into custody, subjected them to intense questioning before arresting them on Thursday night.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am