ಬ್ರೇಕಿಂಗ್ ನ್ಯೂಸ್
03-08-21 04:00 pm Headline Karnataka News Network ಕ್ರೈಂ
ತುಮಕೂರು, ಆಗಸ್ಟ್ 3 : ಆರು ವರ್ಷಗಳ ಹಿಂದೆ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 30 ಸಾವಿರ ರೂ. ದಂಡ ವಿಧಿಸಿ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ ಶಿಕ್ಷೆಗೆ ಗುರಿಯಾಗಿರುವ ಮದರಸಾ ಶಿಕ್ಷಕ. ತುಮಕೂರು ತಾಲೂಕಿನ ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ, 2015ರ ಏಪ್ರಿಲ್ 17ರಂದು 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಕಾರಣ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಅಲ್ಲದೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಫ್ತಿ ಮುಷರಕ್, 2015ರ ಏಪ್ರಿಲ್ 17ರಂದು ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯಕ್ಕೆಂದು ಬಾಲಕನನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ತನ್ನ ಬೈಕ್ನ ಪೆಟ್ರೋಲ್ ಖಾಲಿಯಾಗಿದೆ, ಲಾಡ್ಜ್ನಲ್ಲಿ ಉಳಿಯೋಣ ಎಂದು ಬಾಲಕನನ್ನು ಬಲವಂತದಿಂದ ರೈಲ್ವೇ ನಿಲ್ದಾಣ ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದ. ಮರುದಿನ ಬೈಕ್ನಲ್ಲಿ ಬಾಲಕನನ್ನು ಮರಳಿ ಹಾಸ್ಟೆಲ್ಗೆ ಬಿಟ್ಟು, ಯಾರಿಗೂ ವಿಚಾರ ಹೇಳದಂತೆ ಆತನಿಗೆ ಬೆದರಿಕೆ ಹಾಕಿ ಅದೇ ದಿನ ಮಧ್ಯಾಹ್ನ ಲಾಡ್ಜ್ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ. ಆದರೆ ಲಾಡ್ಜ್ ಪ್ರವೇಶ ಸಂದರ್ಭದಲ್ಲಿ ರಿಜಿಸ್ಟ್ರಾರ್ ಬುಕ್ ನಲ್ಲಿ ಆರೋಪಿ ತನ್ನ ಹೆಸರು ಮತ್ತು ಹುಡುಗನ ಹೆಸರನ್ನು ಉಲ್ಲೇಖಿಸಿದ್ದ. ಖಾಲಿ ಮಾಡುವಾಗ ಆರೋಪಿಯ ಹೆಸರು ಮಾತ್ರ ಬರೆದಿರುವುದು ದಾಖಲಾಗಿತ್ತು.

ಘಟನೆ ನಡೆದ ನಂತರ ಬಾಲಕನನ್ನು ಆತನ ತಾಯಿ ಭೇಟಿಯಾದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ಬೆಳಕಿಗೆ ಬಂದಿತ್ತು. ತಾಯಿಯ ಮುಂದೆ ಬಾಲಕ ತನ್ನ ನೋವನ್ನು ಹೇಳಿಕೊಂಡಿದ್ದನು. ಅಲ್ಲದೆ, ಹಾಸ್ಟೆಲ್ನಿಂದ ತನ್ನನ್ನು ಕರೆದು ಹೋಗುವಂತೆ ಕೇಳಿಕೊಂಡಿದ್ದ. ಈ ಬಗ್ಗೆ ಬಾಲಕನ ತಾಯಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377(ಅಸಹಜ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯವು ವಿಚಾರಣೆ ವೇಳೆ 11 ಮಂದಿ ಪ್ರತ್ಯಕ್ಷ ದರ್ಶಿಗಳ ಸಾಕ್ಷಿಯನ್ನು ಪಡೆದಿದ್ದು, ದೌರ್ಜನ್ಯಕ್ಕೊಳಗಾದ ಬಾಲಕ ಮತ್ತು ತಾಯಿಯ ಹೇಳಿಕೆಗಳು ನಿರ್ಣಾಯಕವೆಂದು ಪರಿಗಣಿಸಿ, ಅಪರಾಧಿ ಮದರಸಾ ಶಿಕ್ಷಕನಿಗೆ ಶಿಕ್ಷೆ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತ ಬಾಲಕನ ಪರವಾಗಿ ಸರ್ಕಾರಿ ಅಭಿಯೋಜಕಿ ಗಾಯತ್ರಿ ವಾದ ಮಂಡಿಸಿದ್ದರು.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm