ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am