ಬ್ರೇಕಿಂಗ್ ನ್ಯೂಸ್
08-08-21 09:00 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 8; ಬಾಂಗ್ಲಾದೇಶಿಯರ ಅಕ್ರಮ ವಾಸದ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಎರಡು ಕಡೆ ದಾಳಿ ನಡೆಸಿದ್ದು ನಕಲಿ ಐಡಿ, ದಾಖಲೆ ಪತ್ರಗಳನ್ನು ತಯಾರಿಸಿಕೊಡುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದಾರೆ.
ಬಾಂಗ್ಲಾದೇಶಿಯರಿಗೆ ನಕಲಿ ಐಡಿ ಕಾರ್ಡ್ ಮಾಡಿಕೊಡುತ್ತಿದ್ದ ವ್ಯಕ್ತಿಯ ಮನೆಗೆ ದಾಳಿ ನಡೆಸಿದ ಪೊಲೀಸರು, ಒಬ್ಬನನ್ನು ಬಂಧಿಸಿದ್ದಾರೆ. ನಕಲಿ ಐಡಿ ಕಾರ್ಡ್ ಗಳನ್ನು ಮಾಡಿಕೊಡಲು ಬಳಸುತ್ತಿದ್ದ ಆರು ಡಿಜಿಟಲ್ ಉಪಕರಣಗಳು, ಹಾರ್ಡ್, ಡಿಸ್ಕ್, ಮೊಬೈಲ್ ಫೋನ್ ಗಳು, ಐಡಿ ಕಾರ್ಡ್ ಮಾಡುವುದಕ್ಕಾಗಿ ರೆಡಿ ಮಾಡಿದ್ದ ಹಲವಾರು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಬಾಂಗ್ಲಾದೇಶಿ ಯುವತಿಯನ್ನು ಅತ್ಯಾಚಾರ ಮಾಡಿ, ವಿಕೃತವಾಗಿ ಬಳಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಬಳಿಕ ಪೊಲೀಸರು ಯುವತಿಯನ್ನು ಪತ್ತೆಮಾಡಿ, ಅದಕ್ಕೆ ಕಾರಣವಾಗಿದ್ದ ರಾಮಮೂರ್ತಿ ನಗರದಲ್ಲಿ ನೆಲೆಸಿದ್ದ ಆರು ಮಂದಿ ಬಾಂಗ್ಲಾನ್ನರನ್ನು ಬಂಧಿಸಿದ್ದರು. ಈ ವೇಳೆ, ಯುವತಿಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಪ್ರಯತ್ನ ಪಟ್ಟಿದ್ದು ಅದಕ್ಕೆ ನಿರಾಕರಿಸಿದ ಯುವತಿಯ ಮೇಲೆ ವಿಕೃತವಾಗಿ ಲೈಂಗಿಕ ಕಿರುಕುಳ ನೀಡಿದ್ದು ತಿಳಿದುಬಂದಿತ್ತು.
ಅಲ್ಲದೆ, ಅಕ್ರಮವಾಗಿ ನುಸುಳಿ ಬರುವ ಬಾಂಗ್ಲಾ ದೇಶಿ ನಿವಾಸಿಗಳಿಗೆ ಭಾರತೀಯ ಐಡಿ ಕಾರ್ಡ್ ಒದಗಿಸುತ್ತಿದ್ದ ಜಾಲದ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಯುವತಿಯರು, ಯುವಕರು ಭಾರತದ್ದೇ ದಾಖಲೆ ಪತ್ರಗಳನ್ನು ತಯಾರಿಸಿ ಪ್ರಮುಖ ನಗರಗಳಲ್ಲಿ ನೆಲೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಕೈಗೆತ್ತಿಕೊಂಡಿದ್ದು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಿತ್ತು.
Oficials of the National Investigation Agency (NIA) carried out searches in Bangalore in connection with a human trafficking case involving a group of Bangladeshi nationals and recovered incriminating documents, the agency said. The investigation agency raided two places on Saturday linked to a person suspected to be involved in creating fake IDs for Bangladeshi traffickers in the city, the NIA said in a statement.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am