ಬ್ರೇಕಿಂಗ್ ನ್ಯೂಸ್
10-08-21 04:04 pm Headline Karnataka News Network ಕ್ರೈಂ
ಬೆಂಗಳೂರು, ಆ. 10: ಬೆಲೆಯಲ್ಲಿ ಚಿನ್ನವನ್ನು ಮೀರಿಸುವ ತಿಮಿಂಗಲದ ವೀರ್ಯ ಅಂಬರ್ ಗ್ರಿಸ್ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 80 ಕೋಟಿ ಮೌಲ್ಯದ ಅಂಬರ್ ಗ್ರಿಸ್ ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೆ.ಜಿ. ಒಂದು ಕೋಟಿ ರೂ. ಬೆಲೆ ಇರುವ ಅಂಬರ್ ಗ್ರಿಸ್ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ. 80 ಕೋಟಿ ಮೌಲ್ಯದ 80 ಕೆ.ಜಿ. ಅಂಬರ್ ಗ್ರಿಸ್‌ನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಐವರು ಪೊಲೀಸರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿ ತನಿಖಾ ತಂಡಕ್ಕೆ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಿದರು.
ಬೆಂಗಳೂರಿನ ಮಜೀದ್ ಪಾಷಾ, ಮಹಮದ್ ಮುನ್ನಾ, ಗುಲಾಬ್ ಚಂದ್, ಸಂತೋಷ್, ರಾಯಚೂರು ಮೂಲದ ಜಗನ್ನಾಥಾಚಾರ್ ಬಂಧಿತ ಆರೋಪಿಗಳು. ಇವರಿಂದ 80 ಕೆ.ಜಿ. ಮೌಲ್ಯದ ಅಂಬರ್ ಗ್ರಿಸ್ ಗಟ್ಟಿ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ರೆಡ್ ಮರ್ಕೈರಿ ತಾಮ್ರದ ಬಾಟಲಿ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಪುರಾತನವಾದ ಸ್ಟೀಮ್ ಫ್ಯಾನ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುಂಗಂಧ ದ್ರವ್ಯಕ್ಕೆ ಬಳಸುವ ಅಂಬರ್ ಗ್ರಿಸ್‌ಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅತಿ ದುಬಾರಿ ಬೆಲೆ. ಒಂದು ಕೆ.ಜಿ ಅಂಬರ್ ಗ್ರಿಸ್ ಒಂದು ಕೋಟಿ ರೂ.ಗೆ ಬೆಲೆಯಿದೆ. ಅದೇ ಚಿನ್ನ ಒಂದು ಕೆ.ಜಿ. 40 ರಿಂದ 50 ಲಕ್ಷ ರೂ. ಹೀಗಾಗಿ ಇದನ್ನು ಫ್ಲೋಟಿಂಗ್ ಗೋಲ್ಡ್ ಎಂದೇ ಕರೆಯುತ್ತಾರೆ. ಇದನ್ನು ಅಕ್ರಮವಾಗಿ ಸಂಗ್ರಹ ಮಾಡಿಕೊಂಡು ಮಾರಾಟ ಮಾಡಲು ಯತ್ನಿಸಿದ ಖಚಿತ ಮಾಹಿತಿ ಆಧರಿಸಿ ಡಿಸಿಪಿ ಕೆ.ಪಿ. ರವಿಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣಾ ದಳ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಐವರು ಆರೋಪಿಗಳು ಸಿಕ್ಕಿಬಿದ್ದಿದ್ದು ಅವರಿಂದ 80 ಕೋಟಿ ರೂ. ಮೌಲ್ಯದ ಅಂಬರ್ ಗ್ರಿಸ್ ವಶಪಡಿಸಿಕೊಳ್ಳಲಾಗಿದೆ.
ಕೆ.ಜಿ. ಹಳ್ಳಿ ಪೊಲೀಸರ ಮೊದಲ ಕಾರ್ಯಾಚರಣೆ: ಕೆ.ಜಿ. ಹಳ್ಳಿ ಪೊಲೀಸರು ಕರ್ನಾಟಕದಲ್ಲಿ ಮೊದಲ ಬಾರಿಗೆ ಅಂಬರ್ ಗ್ರಿಸ್ ಜಾಲವನ್ನು ಪತ್ತೆ ಮಾಡಿದ್ದರು. ಮಾಗಡಿ ಮುಖ್ಯ ರಸ್ತೆಯ ಸಯ್ಯದ್ ತಜ್ಮುಲ್ ಪಾಷಾ, ಪ್ಯಾಲೇಸ್ ಗುಟ್ಟಹಳ್ಳಿ ನಿವಾಸಿ ಸಲೀಂಪಾಷಾ, ಜೆ.ಪಿ.ನಗರ ನಿವಾಸಿ ರಫೀ ಉಲ್ಲಾ, ಹಾಗೂ ನಾಸೀರ್ ಪಾಷಾ ಎಂಬುವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದರು.
ಅಂಬರ್ ಗ್ರಿಸ್ ಎಂಬುದು ತಿಮಿಂಗಲದ ವೀರ್ಯ. ಇದು ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಜಗತ್ತಿನಲ್ಲಿಯೇ ಅತಿ ದುಬಾರಿ ಬೆಲೆ ಬಾಳುವ ಸುಗಂಧ ದ್ರವ್ಯಕ್ಕೆ ಇದನ್ನು ಬಳಸುತ್ತಾರೆ. ಇದನ್ನು ಸುಗಂಧ ದ್ರವ್ಯ ಮತ್ತು ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಅರಬ್ ಹಾಗೂ ಚೀನಾ ದೇಶಗಳಲ್ಲಿ ಈ ಅಂಬಗ್ರಿಸ್‌ಗೆ ತುಂಬಾ ಬೇಡಿಕೆಯಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಅಂಬರ್ ಗ್ರಿಸ್ ಬೆಲೆ ಒಂದು ಕೋಟಿ ರೂ.ಗೂ ಅಧಿಕ ಎಂದು ಪೊಲೀಸರು ತಿಳಿಸಿದ್ದಾರೆ.
cb police busted ambergris racket in bengaluru and seized 80 cr worth.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm