ಬ್ರೇಕಿಂಗ್ ನ್ಯೂಸ್
14-08-21 01:38 pm Headline Karnataka News Network ಕ್ರೈಂ
ಚಾಮರಾಜನಗರ, ಆ.14: ಪ್ರೀತಿಸಿದ ಯುವತಿ ತನ್ನನ್ನು ನಿರಾಕರಿಸುತ್ತಿದ್ದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡೇ ಬೆಂಕಿ ಹಚ್ಚಿಕೊಂಡು ಇಬ್ಬರೂ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಶ್ರೀನಿವಾಸ್ (23) ಹಾಗೂ ಅದೇ ಗ್ರಾಮದ ಕಾಂಚನಾ (22) ಮೃತಪಟ್ಟವರು.
ಕಾರಿನ ಒಳಭಾಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಬಗ್ಗೆ ಪೊಲೀಸರು ಶಂಕಿಸಿದ್ದು, ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದೇ ಸೀಟಿನಲ್ಲಿ ಇಬ್ಬರ ತಲೆಬುರುಡೆಗಳು ಮಾತ್ರ ಕಂಡುಬಂದಿವೆ.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಶ್ರೀನಿವಾಸ್ ಕ್ಯಾಬ್ ಚಾಲಕನಾಗಿದ್ದ. ಈ ಹಿಂದೆ ಶಿಕ್ಷಣ ಪಡೆಯುತ್ತಿದ್ದಾಗ ಇಬ್ಬರೂ ಸಹಪಾಠಿಗಳಾಗಿದ್ದರು. ಶ್ರೀನಿವಾಸ್, ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ. ಹಾಗಾಗಿ, ಕಾಂಚನಾ ಕೂಡ ಶ್ರೀನಿವಾಸ್ ನಿಂದ ದೂರ ಇದ್ದಳು ಎನ್ನಲಾಗುತ್ತಿದೆ.
ಇದರಿಂದ ಬೇಸತ್ತಿದ್ದ ಶ್ರೀನಿವಾಸ್, ಕಾಂಚನಾರನ್ನು ಕಾರಿನಲ್ಲಿ ಕೂರಿಸಿಕೊಂಡು ಮಾಂಬಳ್ಳಿಯಿಂದ ಕಿನಕಳ್ಳಿಗೆ ಹೋಗುವ ಮುಖ್ಯ ರಸ್ತೆಯಿಂದ ಎರಡು ಕಿ.ಮೀ. ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಒಳಗೆ ಕುಳಿತುಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾರೆನ್ನಲಾಗಿದೆ. ಪಕ್ಕದ ಜಮೀನಿನಲ್ಲಿ ಹಸು ಮೇಯಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ಕಾರು ಉರಿಯುತ್ತಿದ್ದುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಬಂದಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ನೋಡಿದಾಗ ಒಳಗಡೆ ಎರಡು ತಲೆ ಬುರುಡೆಗಳು ಕಂಡುಬಂದಿದ್ದು ಕಾರಿನ ಬಾಗಿಲು ಲಾಕ್ ಆಗಿತ್ತು.
ಆರಂಭದಲ್ಲಿ ಪ್ರೇಮಿಗಳ ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ, ವಿಚಾರಣೆ ನಡೆಸಿದಾಗ ಶ್ರೀನಿವಾಸ್ ಅವರನ್ನು ಮದುವೆಯಾಗುವುದು ಕಾಂಚನಾ ಕುಟುಂಬದವರಿಗೆ ಇಷ್ಟ ಇರಲಿಲ್ಲ ಹಾಗಾಗಿ ಕಾಂಚನಾ, ದೂರವಾಗಿದ್ದರು ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಇದೇ ವಿಚಾರದಲ್ಲಿ ಮೂರು ತಿಂಗಳ ಹಿಂದೆಯೂ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm