ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
04-04-25 10:54 pm
HK News Desk
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
Mandya Mysuru Bangalore Accident, KSRTC, Car:...
03-04-25 09:44 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
04-04-25 11:07 pm
Mangalore Correspondent
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
Mangalore Court, Lawyers Protest, Judge: ಜಡ್ಜ...
03-04-25 04:04 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm