ಬ್ರೇಕಿಂಗ್ ನ್ಯೂಸ್
17-08-21 01:50 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 17: ಆಸ್ಪತ್ರೆಯಲ್ಲಿದ್ದ ಪತಿಯ ನೆರವಿಗೆ ಬಂದಿದ್ದ ಪತ್ನಿ ಹಾಗೂ ಆಕೆಯ ತಂಗಿಯ ಮೇಲೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಹಾಗೂ ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹೈದರಾಬಾದಿನ ಗಾಂಧಿ ಆಸ್ಪತ್ರೆಯಲ್ಲಿ ನಡೆದಿದೆ.
ಸಂತ್ರಸ್ತೆಯ ಪುತ್ರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಚಿಕಿತ್ಸೆಗೆಂದು ಬಂದಿದ್ದ ತಾಯಿ ಹಾಗೂ ಚಿಕ್ಕಮ್ಮ ಆಸ್ಪತ್ರೆಯಲ್ಲಿ ಇರಲಿಲ್ಲ. ಇಬ್ಬರನ್ನು ಹುಡುಕಾಡಿದಾಗ ಆಕೆಯ ಚಿಕ್ಕಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ. ಆಕೆಯನ್ನು ಮೆಹಬೂಬನಗರಕ್ಕೆ ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ನಡೆದಿರುವ ದೌರ್ಜನ್ಯ ವಿವರಿಸಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಲಕಲುಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಹಬೂಬನಗರ ಜಿಲ್ಲೆಯ ವ್ಯಕ್ತಿಯನ್ನು ಆಗಸ್ಟ್ 5 ರಂದು ಮೂತ್ರಪಿಂಡ ಕಾಯಿಲೆಯ ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪತ್ನಿ ಮತ್ತು ಆಕೆಯ ಸಹೋದರಿ ರೋಗಿಗೆ ಸಹಾಯಕ್ಕಾಗಿ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ರೇಡಿಯೋಗ್ರಾಫರ್, ಆರೋಪಿ ಉಮಾಮಹೇಶ್ವರ್ ಮಹಿಳೆಯ ಸಂಬಂಧಿಯಾಗಿದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಉಮಾಮಹೇಶ್ವರ್ ಈ ತಿಂಗಳ 8ರಂದು ಮಹಿಳೆಯರನ್ನು ಕೋಣೆಯೊಂದಕ್ಕೆ ಕರೆದುಕೊಂಡು ಹೋಗಿ ವೈನ್‌ನಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿದ್ದಾನೆ. ಅವರು ಪ್ರಜ್ಞಾಹೀನ ಸ್ಥಿತಿಗೆ ಹೋದ ನಂತರ ಉಮಾಮಹೇಶ್ವರ ಇತರರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪವಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಾಯಿ ಹಾಗೂ ಚಿಕ್ಕಮ್ಮನನ್ನು ಕೊಲ್ಲುವುದಾಗಿ ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದನಂತೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿ ಉಮಾಮಹೇಶ್ವರ್ ಸೇರಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಇನ್ನೊಬ್ಬ ಮಹಿಳೆ ನಾಪತ್ತೆಯಾಗಿದ್ದು, ಆಕೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ಉಮಾಮಹೇಶ್ವರ್ ಮತ್ತು ಇತರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಅಧೀಕ್ಷಕ ಡಾ.ರಾಜಾರಾವ್ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.
In a shocking incident, a lab technician at Gandhi Hospital allegedly raped two sisters, aged 38 and 40, from Mahabubnagar district and confined one of them in a room for four days. The technician’s friend also allegedly raped one of the sisters.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm