ಬ್ರೇಕಿಂಗ್ ನ್ಯೂಸ್
18-08-21 05:11 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 18 : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಜಯರಾಜ್ ಕೊಲೆಯಾದ ದುರ್ದೈವಿ. ಮೂಡುಬಿದಿರೆ ತಾಲೂಕಿನ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ ಗ್ರಾಮದ ಆನಂದ ಮೇರ ಶಿಕ್ಷೆಗೊಳಗಾದವರು.
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪೇರಮೊಗರು ನಿವಾಸಿ ಜಯರಾಜ್ ಮಂಗಳೂರಿನಲ್ಲಿ ನೌಕರಿ ಮಾಡಿಕೊಂಡಿದ್ದರು. 2014ರಲ್ಲಿ ಅಶ್ವಿನಿಯನ್ನು ವಿವಾಹವಾಗಿದ್ದ ಜಯರಾಜ್, ಮೂಡುಬಿದಿರೆಯಲ್ಲಿ ಬಾಡಿಗೆ ಮನೆ ಮಾಡಿದ್ದರು. 2015ರಲ್ಲಿ ಅಶ್ವಿನಿ ಗರ್ಭಿಣಿಯಾಗಿ ತವರು ಮನೆಗೆ ಹೋಗಿದ್ದರು. ಈ ಸಂದರ್ಭ ಅಶ್ವಿನಿ ಜೊತೆ ಅದೇ ಊರಿನ ಆನಂದ ಎಂಬಾತ ಸಂಬಂಧ ಇರಿಸಿದ್ದು ಜಯರಾಜ್ ಮತ್ತು ಅಶ್ವಿನಿ ನಡುವೆ ವೈಮನಸ್ಸು ಉಂಟಾಗಿತ್ತು.
ತಾಯಿ ಮನೆಯಲ್ಲಿದ್ದ ಅಶ್ವಿನಿ 2016ರ ಸೆಪ್ಟಂಬರ್ 13 ರಂದು ಪತಿ ಜಯರಾಜನ್ನು ಮನೆಗೆ ಕರೆಸಿಕೊಂಡಿದ್ದಳು. ಜಯರಾಜ್ ಬೆಳಗ್ಗೆ 11:30ರ ವೇಳೆಗೆ ಮನೆಗೆ ಆಗಮಿಸಿದ್ದಾಗಲೇ ಕಾದು ಕುಳಿತಿದ್ದ ಆನಂದ, ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು, ಕೊಲೆ ಮಾಡಿದ್ದ. ಬಳಿಕ ಜಯರಾಜ್‌ನ ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿ ಮನೆಯ ಬಳಿಯ ಪಾಳುಬಾವಿಗೆ ಹಾಕಿದ್ದರು. ಮೃತದೇಹ ಕೊಳೆತಾಗ ವಾಸನೆ ಬಾರದ ಹಾಗೆ ರಾಸಾಯನಿಕ ವಸ್ತುವನ್ನು ಹಾಕಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಅಲ್ಲದೆ, ಕೊಲೆ ಮರೆಮಾಚುವ ಉದ್ದೇಶದಿಂದ ಅಶ್ವಿನಿ ತನ್ನ ಪತಿ ಕಾಣೆಯಾಗಿದ್ದಾರೆ ಎಂದು ಸೆ.16 ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅಲ್ಲದೆ ಕೊಲೆ ನಡೆಸಿದ ಬಳಿಕ ಆರೋಪಿ ಆನಂದ, ಜಯರಾಜ್‌ನನ್ನು ಅಪಹರಿಸಿರುವುದಾಗಿ ನಾಟಕ ಮಾಡಿದ್ದ. ಇದಕ್ಕೆ ಶ್ರೀಪತಿ ಮತ್ತು ಧನಪತಿ ಎಂಬವರು ಸಹಕರಿಸಿದ್ದರು. ಜಯರಾಜ್ ಮೊಬೈಲಿನಲ್ಲಿದ್ದ ಸಿಮ್ ಬಳಸಿ, ಆತನ ತಾಯಿಗೆ ಕರೆ ಮಾಡಿದ್ದ ಆರೋಪಿಗಳು, ‘ಜಯರಾಜ್ ನಮಗೆ 62,000 ರೂ. ನೀಡಬೇಕಿತ್ತು. ಅದಕ್ಕಾಗಿ ಅವನನ್ನು ಕರೆದುಕೊಂಡು ಬಂದಿದ್ದೇವೆ. ಆತನಿಂದ ಬರಬೇಕಾದ ಹಣ ಬರದೇ ಆತನನ್ನು ಬಿಡೋದಿಲ್ಲ ಎಂದಿದ್ದರು.
ಆರೋಪಿಗಳ ಪೋನ್ ಕರೆಯಿಂದ ಅನುಮಾನಗೊಂಡ ಜಯರಾಜ್ ಅಣ್ಣ ಗಿರೀಶ್, ಸೆ.22ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ತಮ್ಮನ ಅಪಹರಣ ಆಗಿದೆಯೆಂದು ದೂರು ನೀಡಿದ್ದರು. ಬಳಿಕ ಪೊಲೀಸರು ತನಿಖೆ ನಡೆಸಿದಾಗ ಕೊಲೆ ವಿಚಾರ ಬೆಳಕಿಗೆ ಬಂದಿದೆ.
ಮೂಡುಬಿದಿರೆ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಸಪ್ಪ ಬಾಲಪ್ಪ ಜಕಾತಿ ಒಟ್ಟು 36 ಮಂದಿ ಸಾಕ್ಷಿದಾರರನ್ನು ವಿಚಾರಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆನಂದ ಮೇರ ಮತ್ತು ಅಶ್ವಿನಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5,000 ರೂ. ದಂಡ, ದಂಡದ ಹಣ ಪಾವತಿಸಲು ತಪ್ಪಿದರೆ ಜೈಲು ಶಿಕ್ಷೆ, ಸಾಕ್ಷಿನಾಶ ಪ್ರಕರಣಕ್ಕೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಅಲ್ಲದೆ, 10,000 ರೂ. ಅನ್ನು ಜಯರಾಜ್ ಅವರ ತಾಯಿಗೆ ನೀಡುವಂತೆ ಹಾಗೂ ಜಯರಾಜ್ ಅವರ ಮಗಳಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ನಾರಾಯಣ ಶೇರಿಗಾರ್ ವಾದ ಮಂಡಿಸಿದ್ದರು.
Wife Murders Husband joining with her boyfriend d Mangaluru additional court sentences life imprisonment for both. The murder took place in Moodbidri where the body was dumped in the well.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm