ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಹೇಳಿದರೆ ಮರ್ಯಾದೆ ಹೋಗುತ್ತೆ ಎಂದವನದ್ದೇ ಮರ್ಯಾದೆ ಮಣ್ಣುಪಾಲು ! ಯುವತಿ ಮೈಮುಟ್ಟಿದ ವಿಟ್ಲದ ವಕೀಲ ಬಂಧನ 

21-08-21 11:17 pm       Mangaluru Correspondent   ಕ್ರೈಂ

ತನ್ನದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವಕೀಲರೊಬ್ಬರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪುತ್ತೂರು, ಆಗಸ್ಟ್ 21: ತನ್ನದೇ ಕಚೇರಿಯಲ್ಲಿ ಟೈಪಿಸ್ಟ್ ಆಗಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವಕೀಲರೊಬ್ಬರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ವಿಟ್ಲದ ವಿ.ಎಚ್. ಕಾಂಪ್ಲೆಕ್ಸ್ ನಲ್ಲಿ ಕಚೇರಿ ಹೊಂದಿರುವ ಉಮ್ಮರ್ ಕೆ.‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆಗಸ್ಟ್ 16 ರಂದು ಸಂಜೆ ಯಾರೂ ಇಲ್ಲದ ವೇಳೆ ತನ್ನ ಮೈಮುಟ್ಟಿ ತಬ್ಬಿಕೊಳ್ಳಲು ಯತ್ನಿಸಿದ್ದು ಅಶ್ಲೀಲವಾಗಿ ವರ್ತಿಸಿದ್ದಾರೆಂದು ಯುವತಿ ದೂರು ನೀಡಿದ್ದರು. ಘಟನೆ ಬಗ್ಗೆ ಮನೆಯಲ್ಲಿ ಹೇಳುತ್ತೇನೆ ಎಂದಿದ್ದಕ್ಕೆ, ನೀನು ಮನೆಯಲ್ಲಿ ಹೇಳಿದರೆ ನಿನ್ನದೇ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ್ದಾರೆ ಎಂಬುದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು. 

ಕಿರುಕುಳ ದೂರಿನಂತೆ, ಪೊಲೀಸರು ಆರೋಪಿ ವಕೀಲ ಉಮ್ಮರ್ ಅನ್ನು ಬಂಧಿಸಿದ್ದಾರೆ. ವಕೀಲನ ಬಂಧನ ಆಗಿರುವುದನ್ನು ಎಸ್ಪಿ ದೃಢಪಡಿಸಿದ್ದಾರೆ.

Puttur Lawyer arrested for misbehaving with the Lady staff at his office. The arrested lawyer has been identified as Umar