ಬ್ರೇಕಿಂಗ್ ನ್ಯೂಸ್
25-08-21 05:25 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನ ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನ ಕುಡುಕರ ಗ್ಯಾಂಗ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹರಿದು ಮುಕ್ಕಿದೆ.
ಸ್ನೇಹಿತನ ಜೊತೆಗೆ ಕುಳಿತಿದ್ದ ವೇಳೆ, ಎಣ್ಣೆ ಪಾರ್ಟಿ ಮಾಡ್ತಿದ್ದ ಕಾಮುಕರು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಲೇಔಟ್ ಗೆ ಬಂದಿದ್ದರು. ಅಲ್ಲಿನ ಮೂಲೆಯಲ್ಲಿ ಇಬ್ಬರೂ ಕುಳಿತಿದ್ದ ವೇಳೆ ಅಲ್ಲಿಯೇ ಕುಳಿತು ಎಣ್ಣೆ ಪಾರ್ಟಿ ಮಾಡುತ್ತಿದ್ದ ಐವರ ಗ್ಯಾಂಗ್ ವಿದ್ಯಾರ್ಥಿನಿಯ ಮೇಲೆರಗಿದ್ದಾರೆ.
ಈ ವೇಳೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿನಿಯ ಸ್ನೇಹಿತನಿಗೆ ಗ್ಯಾಂಗ್ ಹಲ್ಲೆ ಮಾಡಿದ್ದು ಕಲ್ಲಿನಿಂದ ಹೊಡೆದು ಅಟ್ಟಿದ್ದಾರೆ. ಕಲ್ಲಿನೇಟಿನಿಂದ ಸ್ನೇಹಿತ ಕುಸಿದು ಬಿದ್ದ ಬಳಿಕ ವಿದ್ಯಾರ್ಥಿನಿಯನ್ನ ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ನಾಲ್ಕರಿಂದ ಐದು ಮಂದಿಯಿದ್ದ ಗ್ಯಾಂಗ್ ಅತ್ಯಾಚಾರ ಮಾಡಿದ್ದಾರೆ. ಬಳಿಕ ಎಚ್ಚತ್ತುಕೊಂಡ ಹುಡುಗಿಯ ಸ್ನೇಹಿತ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಅಸ್ವಸ್ಥಳಾಗಿ ಬಿದ್ದಿದ್ದ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಸಂತ್ರಸ್ತೆಯ ಸ್ನೇಹಿತನ ಹೇಳಿಕೆಯನ್ನ ದಾಖಲು ಮಾಡಿದ್ದಾರೆ.
ಎಸಿಪಿ ಶಶಿಧರ್ ಹಾಗೂ ಆಲನಹಳ್ಳಿ ಠಾಣಾ ಇನ್ಸ್‌ಪೆಕ್ಟರ್ ರವಿಶಂಕರ್ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಆಗಮಿಸಿದ್ದು ಘಟನೆಯನ್ನ ಖಂಡಿಸಿದ್ದಾರೆ.
A student of a private college in Mysore has been gang-raped by 6 boys at a deserted place. The girl had come with her friend to the spot. Six boys assaulted the girl and then raped her.
04-04-25 10:28 am
HK News Desk
Mandya Mysuru Bangalore Accident, KSRTC, Car:...
03-04-25 09:44 pm
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
03-04-25 11:10 pm
HK News Desk
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
03-04-25 10:14 pm
Dinesh Nayak, Mangaluru Correspondent
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm