ಬ್ರೇಕಿಂಗ್ ನ್ಯೂಸ್
26-08-21 11:21 am Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 26: ಅರಮನೆ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಕಿರಾತಕರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.
ನಂತರ ವಿಡಿಯೋ ತೋರಿಸಿ, ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪ್ರಾಣ ರಕ್ಷಣೆಗಾಗಿ ಹಣ ಕೊಡಲು ಸಂತ್ರಸ್ತೆ ಹಾಗೂ ಆತನ ಸ್ನೇಹಿತ ಒಪ್ಪಿಕೊಂಡಿದ್ದರು. ಆದರೆ, ಮಧ್ಯರಾತ್ರಿ 2 ಗಂಟೆಯಾದರೂ ಹಣ ನೀಡಲು ಸಾಧ್ಯವಾಗದಿದ್ದಾಗ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಇಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸದ್ಯಕ್ಕೆ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಘಟನೆ ಬಗ್ಗೆ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಎಲ್ಲರೂ ಕಂಠಪೂರ್ತಿ ಕುಡಿದಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಬಿಯರ್ ಬಾಟಲ್ಗಳು ದೊರೆತಿದ್ದು, ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೃತ್ಯ ನಡೆಸಿದವರು ಸ್ಥಳೀಯರೇ ಎನ್ನಲಾಗಿದ್ದು, ಎಲ್ಲರೂ 20 ರಿಂದ 30 ವರ್ಷ ವಯಸ್ಸಿನ ಯುವಕರಾಗಿದ್ದು, ಕನ್ನಡದಲ್ಲೇ ಮಾತನಾಡುತ್ತಿದ್ದರು ಎಂದು ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
Mysore Girl gang raped accused Shoot the video and demanded three lakhs of money.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm