ಬ್ರೇಕಿಂಗ್ ನ್ಯೂಸ್
27-08-21 12:31 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 27: ಪತ್ನಿಯ ಅಕ್ಕ ಮತ್ತು ಭಾವನ ಆಸ್ತಿಯನ್ನು ಕಬಳಿಸಲೆಂದು ಅಪಘಾತ ಮಾಡಿಸಿ ಅವರನ್ನು ನಿರ್ದಯವಾಗಿ ಕೊಲೆಗೈದ ನಾಲ್ವರು ಕಿರಾತಕರಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗರಾಜ್ ಎಂಬಾತ ತನ್ನ ಪತ್ನಿಯ ಅಕ್ಕ ಮತ್ತು ಭಾವನನ್ನು ಜಗದೀಶ್, ಲತೇಶ್ ಹಾಗೂ ದೀಪಕ್ ಜೊತೆ ಸೇರಿ ಅಪಘಾತ ಮಾಡಿಸುವ ಮೂಲಕ ಹತ್ಯೆಗೈದಿದ್ದ.
ಏನಿದು ಪ್ರಕರಣ?:
2015ರ ಜೂನ್ 17 ರಂದು ಮೋಹನ್ ಕುಮಾರ್ ಮತ್ತು ಪವಿತ್ರ ಸ್ವಗ್ರಾಮ ಬ್ಯಾಡರಹಳ್ಳಿಯಿಂದ ಚನ್ನರಾಯಪಟ್ಟಣಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಟಾಟಾ ಸುಮೋ ವಾಹನ ಉದಯಪುರ ಸಮೀಪದ ಊಪಿನಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಥಳದಲ್ಲಿಯೇ ಪತಿ-ಪತ್ನಿ ಸಾವಿಗೀಡಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು, ಇದು ಉದ್ದೇಶಪೂರ್ವಕವಾಗಿ ಮಾಡಿರುವ ಅಪಘಾತ ಎಂಬುದು ತಿಳಿದುಬಂದಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಲ್ಕು ಮಂದಿ ಆರೋಪಿಗಳನ್ನು ಪಟ್ಟಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪಡೆದಿದ್ದರು. ಈ ವೇಳೆ ಆಸ್ತಿ ಆಸೆಗಾಗಿ ಅಪಘಾತ ಮಾಡಿ ಕೊಲೆಗೈದಿರುವುದು ಬಹಿರಂಗವಾಗಿದೆ. ಈ ವಿಚಾರ ಕೇಳಿದ ಕುಟುಂಬಕ್ಕೆ ದಿಗ್ಭ್ರಾಂತವಾಗಿತ್ತು.
ಇದೀಗ ನಾಲ್ವರು ಆರೋಪಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸಂಶಿ ಜೀವಾವಧಿ ಶಿಕ್ಷೆ ವಿಧಿಸಿ, ತಲಾ 25 ಸಾವಿರ ದಂಡದ ಶಿಕ್ಷೆ ನೀಡಿದ್ದಾರೆ. ದಂಡ ಪಾವತಿಸದೇ ಇದ್ದಲ್ಲಿ ಮತ್ತೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ನಾಗರಾಜ್ ನಕಲಿ ಚೆಕ್ ನೀಡಿ ವಂಚಿಸಿದ ಹಿನ್ನೆಲೆಯಲ್ಲಿ ಆತನಿಗೆ ನಾಲ್ಕು ವರ್ಷ ಕಠಿಣ ಕಾರಾಗೃಹ ಹಾಗೂ ರೂ.20,000 ಹೆಚ್ಚುವರಿ ದಂಡ ವಿಧಿಸಿ, ಪಾವತಿಸದೇ ಇದ್ದಲ್ಲಿ ಮತ್ತೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಪವಿತ್ರ ಮತ್ತು ಮೋಹನ್ ಕುಮಾರ್ ಅವರ ಅಪ್ರಾಪ್ತ ಮಕ್ಕಳಿಗೆ 35 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುವಂತೆಯೂ ತೀರ್ಪಿನಲ್ಲಿ ತಿಳಿಸಲಾಗಿದೆ.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm