ಬ್ರೇಕಿಂಗ್ ನ್ಯೂಸ್
28-08-21 12:03 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ತಮಿಳುನಾಡಿಗೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಘಟನೆ ಸಂಬಂಧಿಸಿ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಸರಿಯಾದ ಸುಳಿವು ಸಿಗದ ಕಾರಣ ಆರೋಪಿಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ತಾಂತ್ರಿಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನೇ ಆರೋಪಿಗಳನ್ನಾಗಿ ತೋರಿಸಲಿದ್ದಾರೆ.
ಕೆಲವು ಮೂಲಗಳ ಪ್ರಕಾರ, ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬಂದಿದ್ದ ವ್ಯಾಪಾರಿಗಳ ತಂಡ ಹಿಂತಿರುಗಿ ಹೋಗುವಾಗ ರೋಡ್ ರಾಬರಿಗೆ ಯತ್ನಿಸುತ್ತಿದ್ದಾಗ ಯುವ ಜೋಡಿ ಕೈಗೆ ಸಿಕ್ಕಿಬಿದ್ದಿದ್ದು ಯುವತಿಯ ಮೇಲೆರಗಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಮೈಸೂರಿನ ಕಾಲೇಜೊಂದರ ಬಿಇ ವಿದ್ಯಾರ್ಥಿಗಳು ಕೂಡ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಮೂವರು ಮತ್ತು ಇನ್ನೊಬ್ಬ ಕೇರಳದ ನಿವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.
ಇದೀಗ ಹಲವು ಕಡೆಗಳಿಂದ 25ಕ್ಕೂ ಹೆಚ್ಚು ಮಂದಿಯನ್ನು ಶಂಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಅನುಸಾರ ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆ ನಡೆಸಲಿದ್ದಾರೆ. ಸಂತ್ರಸ್ತ ಯುವತಿ ಮತ್ತು ಯುವಕನ ಮೂಲಕವೇ ಆರೋಪಿಗಳ ಪತ್ತೆ ಕಾರ್ಯ ನಡೆಯಲಿದೆ. ಆದರೆ, ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮುಂಬೈಗೆ ತೆರಳಿದ್ದಾರೆ. ಯುವಕನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ನಡುವೆ, ಆರೋಪಿಗಳು ತಮಿಳು ಮಾತನಾಡುತ್ತಿದ್ದರು. ಕಾರ್ಮಿಕರ ರೀತಿ ಇದ್ದರು ಎಂಬ ಬಗ್ಗೆ ಯುವಕ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
The Mysuru Police have arrested five persons for gang raping a college student after assaulting her friend at the foot of Chamundi Hill. The heinous crime was committed on the night of Aug. 24 and the incident hit national headlines. Now the city Police have managed to apprehend five accused.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm