ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್‌ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್‍ಬುಕ್‍ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm