ಬ್ರೇಕಿಂಗ್ ನ್ಯೂಸ್
07-09-21 11:56 am Mangaluru Correspondent ಕ್ರೈಂ
ಸುಳ್ಯ, ಸೆ.7 : 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಎಂಬವರ ಮೇಲೆ ನಡೆದಿದ್ದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ಮಂಡಲ ಸಮಿತಿಯ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ತಂಡಕ್ಕೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಸರಸ್ವತಿ ಕಾಮತ್ ಮೇಲಿನ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಸೆ.6 ರಂದು ಸುಳ್ಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಿದೆ. 2014 ರ ಲೋಕಸಭಾ ಚುನಾವಣೆಯ ಸಂದರ್ಭ ಸರಸ್ವತಿ ಕಾಮತ್ ಅವರು ನೆಲ್ಲೂರು ಕೇಮ್ರಾಜೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಸಂದರ್ಭ ಹರೀಶ್ ಕಂಜಿಪಿಲಿ ಮತ್ತು ಇತರ 14 ಜನರ ಗುಂಪು ಸರಸ್ವತಿ ಕಾಮತ್ ಮೇಲೆ ಹಲ್ಲೆ ಮತ್ತು ಮಾನಭಂಗಕ್ಕೆ ಯತ್ನಿಸಿದ್ದರು ಎಂದು ಆರೋಪಿಸಿ ಸರಸ್ವತಿ ಕಾಮತ್ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಸೆಕ್ಷನ್ 149 ,147/149, 341, 506 , 504, 323, 354 ಸೆಕ್ಷನ್ ಅಡಿಯಲ್ಲಿ ಪ್ರಕರಣ ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಜೆ ಎಂ ಎಫ್ ಸಿ ಕೋರ್ಟ್ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್ ಎ. ಅವರು ಆರೋಪಿಗಳಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಪ್ರತಿಕ್ರಿಯಿಸಿದ್ದು ಈ ಬಗ್ಗೆ ನಮಗೆ ಅಧಿಕೃತ ಆದೇಶ ಪ್ರತಿ ದೊರೆತ ಬಳಿಕ ಮೇಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.
Sullia Zilla panchayat member BJP leader Harish Kanjipili sentensed to jail for two years over assult on congress member Saraswathi Kamath in 2014.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm