ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm