ಬ್ರೇಕಿಂಗ್ ನ್ಯೂಸ್
08-09-21 12:20 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಸೆ. 8: ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣಾಧಿಕಾರಿ ಮೂತ್ರ ಕುಡಿಸಿದ ಪ್ರಕರಣ ಸಂಬಂಧ, ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪಿಎಸ್‌ಐ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿಕ್ಕಮಗಳೂರು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್‌ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಕರ್ನಾಟಕ ಹೈಕೋರ್ಟ್‌ಲ್ಲಿ ಜಾಮೀನು ವಜಾ ಆಗುತ್ತಿದ್ದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಪೊಲೀಸರ ತಂಡ ಆರೋಪಿ ಅಅರ್ಜುನ್‌ರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಬಳಿಕ ಸಿಐಡಿ ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಮಂಗಳವಾರ ಆರೋಪಿ ಅರ್ಜುನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ತೀರ್ಪು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಸಂತ್ರಸ್ತ ದಲಿತ ಯುವಕ ಪುನೀತ್ ಪರವಾಗಿ ಸರಕಾರಿ ಅಭಿಯೋಜಕಿ ಭಾವನಾ ಹಾಗೂ ಖಾಸಗಿ ವಕೀಲ ಪರಮೇಶ್ವರ್ ವಾದ ಮಂಡಿಸಿದ್ದರು.
ಮೂಡಿಗೆರೆ ತಾಲೂಕಿನ ಕಿರಗುಂದದಲ್ಲಿ ಮಹಿಳೆಯ ಮನೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ ಕೆ. ಎಲ್. ಪುನೀತ್ ಮೇಲೆ ಗೋಣಿಬೀಡು ಠಾಣೆಯಲ್ಲಿ ದೌರ್ಜನ್ಯ ಎಸಗಲಾಗಿತ್ತು.
ಆದರೆ ಮಹಿಳೆ ದೂರು ನೀಡದಿದ್ದರೂ ಪುನೀತ್‌ರನ್ನು ಠಾಣೆಗೆ ಕರೆತಂದಿದ್ದ ಪಿಎಸ್‌ಐ ಅರ್ಜುನ್ ದೌರ್ಜನ್ಯ ನಡೆಸಿದ್ದರು. ಠಾಣೆಯಲ್ಲಿ ತಲೆಕೆಳಗಾಗಿ ನೇತು ಹಾಕಿ ಪುನೀತ್ ಮೇಲೆ ಹಲ್ಲೆ ಮಾಡಲಾಗಿತ್ತು. ನೀರು ಕೇಳಿದಾಗ ಮೂತ್ರ ಕುಡಿಸಲು ಪ್ರಯತ್ನ ನಡೆಸಲಾಗಿತ್ತು. ನೆಲದಲ್ಲಿ ಬಿದ್ದಿದ್ದ ಮೂತ್ರ ನೆಕ್ಕುವಂತೆ ಒತ್ತಾಯಿಸಲಾಗಿತ್ತು.
ಈ ಕುರಿತು ಪುನೀತ್ ಪೊಲೀಸರಿಗೆ ದೂರು ನೀಡಿದ್ದರು. ಘಟನೆ ಬೆಳಕಿಗೆ ಬಂದ ಬಳಿಕ ಚಿಕ್ಕಮಗಳೂರು ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಗೋಣಿಬೀಡು ಠಾಣೆಗೆ ಭೇಟಿ ನೀಡಿದ್ದರು. ಯುವಕ ಪುನೀತ್ ಭೇಟಿಯಾಗಿ ಆರೋಪದ ಬಗ್ಗೆ ಮಾತುಕತೆ ನಡೆಸಿದ್ದರು. ಅರ್ಜುನ್ ವಿರುದ್ಧ ದೂರು ಸಹ ದಾಖಲಾಗಿತ್ತು.
dalit youth drink urine case court dismisses psi arjun bail application
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm