ಬ್ರೇಕಿಂಗ್ ನ್ಯೂಸ್
08-09-21 01:18 pm Mangaluru Correspondent ಕ್ರೈಂ
ಪುತ್ತೂರು, ಸೆ.8: ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಗೆ ತಡೆಯೊಡ್ಡಿದ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ಕು ಮಂದಿ ಆರೋಪಿಗಳು ಬಂಧನ ತಪ್ಪಿಸಲು ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕಬಕ ನಿವಾಸಿಗಳಾದ ನೌಶಾದ್, ಮಹಮ್ಮದ್ ಹ್ಯಾರಿಸ್, ಮಹಮ್ಮದ್ ತೌಸಿಫ್, ಶಂಸುದ್ದೀನ್ ಬಂಧಿತರು. ಇವರು ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.
ಪುತ್ತೂರು ನಗರ ಠಾಣೆ ಇನ್ ಸ್ಪೆಕ್ಟರ್ ಗೋಪ ನಾಯ್ಕ್ ಮತ್ತು ಸಬ್ ಇನ್ ಸ್ಪೆಕ್ಟರ್ ಸುತೇಶ್ ನೇತೃತ್ವದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆಗಸ್ಟ್ 15ರಂದು ಕಬಕ ಗ್ರಾಮ ಪಂಚಾಯತ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ರಥಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಎಸ್ ಡಿಪಿಐ ಕಾರ್ಯಕರ್ತರ ಗುಂಪು ರಥಕ್ಕೆ ತಡೆಯೊಡ್ಡಿ ಧಿಕ್ಕಾರ ಘೋಷಣೆ ಕೂಗಿತ್ತು. ಅಲ್ಲದೆ, ರಥದಲ್ಲಿದ್ದ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಚಿತ್ರವನ್ನು ತೆಗೆದು ಟಿಪ್ಪು ಚಿತ್ರ ಹಾಕುವಂತೆ ಒತ್ತಡ ಹೇರಿತ್ತು. ಈ ಬಗ್ಗೆ ಕಡಬ ಗ್ರಾಮ ಪಂಚಾಯತ್ ಪಿಡಿಓ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
Read: ಸ್ವಾತಂತ್ರ್ಯ ರಥಕ್ಕೆ ಎಸ್ಡಿಪಿಐ ತಡೆ ; ಮೂವರು ಆರೋಪಿಗಳ ಬಂಧಿಸಿದ ಪುತ್ತೂರು ಪೊಲೀಸರು
The police have arrested four more persons relating to the obstruction of the movement of the 'Grama Swarajya Ratha' that was taken around on the occasion of the celebration of 75 years of Indian independence within Kabaka gram panchayat limits.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm