ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm