ಬ್ರೇಕಿಂಗ್ ನ್ಯೂಸ್
09-09-21 03:05 pm Headline Karnataka News Network ಕ್ರೈಂ
ಶಿವಮೊಗ್ಗ, ಸೆ.9 : ನಡುರಸ್ತೆಯಲ್ಲಿ ಮಾರಕಾಸ್ತ್ರ ತೋರಿಸಿ ಆತಂಕ ಮೂಡಿಸಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಓರ್ವ ಪರಾರಿಯಾಗಿದ್ದಾನೆ.
ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದ ಬಳಿ ಬುಧವಾರ ಬೆಳಗ್ಗೆ ಕಾರಿನಲ್ಲಿ ಬಂದಿದ್ದ ಯುವಕರು ಕ್ಷುಲ್ಲಕ ವಿಚಾರಕ್ಕೆ ಸಾರ್ವಜನಿಕರಿಗೆ ಚಾಕು, ಮಾರಕಾಸ್ತ್ರ ತೋರಿಸಿ ಬೆದರಿಸಿದ್ದರು. ಯುವಕರು ಒಬ್ಬ ವ್ಯಕ್ತಿ ಮತ್ತು ಪೊಲೀಸ್ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆಸಿದ್ದರು. ಈ ಬಗ್ಗೆ ಸ್ಥಳೀಯರು ಪ್ರಶ್ನಿಸುತ್ತಿದ್ದಂತೆ, ಕಾರಿನಲ್ಲಿದ್ದ ನಾಲ್ವರು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಕಾರನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದ್ದರು. ಬಳಿಕ ಕಾರನ್ನು ಸ್ಳಳದಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿದ ಯುವಕರನ್ನು ಜನರು ಅಟ್ಟಾಡಿಸಿ ಹಿಡಿದು, ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ಗಾಂಜಾ ಸೇವಿಸಿದ್ದು, ಅದರ ಮತ್ತಿನಲ್ಲಿ ದುಷ್ಕೃತ್ಯ ಎಸಗಲು ಮುಂದಾಗಿದ್ದರು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಗಾಂಜಾ ಸೇವೆನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾರನ್ನು ಸಂಪೂರ್ಣವಾಗಿ ತಪಾಸಣೆ ಮಾಡಲಾಗುತ್ತದೆ. ಅಲ್ಲದೆ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬನಿಗೆ ಅಪರಾಧ ಹಿನ್ನೆಲೆಯಿದೆ. ಅಂಗಡಿಯೊಂದರಲ್ಲಿ 2.50 ಲಕ್ಷ ರೂ. ಹಣ ಕಳವು ಮಾಡಿ ಸಿಕ್ಕಿಬಿದ್ದಿದ್ದ. ಎರಡು ವಾರದ ಹಿಂದಷ್ಟೇ ಈತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿಸಿದ್ದಾರೆ.
ಯುವಕರು ಬಳಕೆ ಮಾಡಿದ್ದ ಕಾರು ಅವರದ್ದಲ್ಲ. ಕಳ್ಳತನ ಮಾಡಿದ್ದ ಕಾರನ್ನು ಬಳಸಿ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಕಾರು ಕಳ್ಳತನ ಆಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Three arrested for showing weapons in the road to Public in Shivamogga. When arrested the police have got to know that the car they were using was a theft car.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am