ಬ್ರೇಕಿಂಗ್ ನ್ಯೂಸ್
10-09-21 01:25 pm Headline Karnataka News Network ಕ್ರೈಂ
ಹಾಸನ, ಸೆ.10: ಮನೆಗೆ ನುಗ್ಗಿದ ಕಳ್ಳರು ಬರೋಬ್ಬರಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನ ಹೊರವಲಯದ ರಿಂಗ್ ರೋಡ್ ಸಮೀಪದಲ್ಲಿ ನಡೆದಿದೆ. ಗ್ರಾನೈಟ್ ಉದ್ಯಮಿ ರಘು ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.
ರಘು ಅವರ ಮನೆಯಲ್ಲಿ ಅಕ್ಟೋಬರ್ 1 ಮತ್ತು 2 ರಂದು ಮದುವೆ ಸಮಾರಂಭ ನಡೆಯಲಿತ್ತು. ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು. ಜೊತೆಗೆ ರಘು ಅವರು ತಮ್ಮ ಉದ್ದಿಮೆಯ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು. ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಒಡೆದು ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.

ಪರಿಚಯಸ್ಥರಿಂದಲೇ ಕೃತ್ಯ ಶಂಕೆ!
ಬ್ಯಾಂಕಿನಿಂದ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದೆ. ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಕಂಡುಬರುತ್ತಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಾಸನದ ಎಸ್ಪಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳ ಸ್ಥಳಕ್ಕೆ ಆಗಮಿಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am