ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm