ಬ್ರೇಕಿಂಗ್ ನ್ಯೂಸ್
11-09-21 01:39 pm Headline Karnataka News Network ಕ್ರೈಂ
ಬೆಂಗಳೂರು, ಸೆ.11 : ರಾಜಧಾನಿ ಬೆಂಗಳೂರಿನಲ್ಲಿ ಒಬ್ಬಂಟಿ ವೃದ್ಧರ ಮನೆಗಳನ್ನೇ ಗುರಿಯಾಗಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಆರು ಮಂದಿಯನ್ನು ಬೆಳ್ಳಂದೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬೆಳ್ಳಂದೂರು ನಿವಾಸಿ ಲಕ್ಷ್ಮಣ್ ಎಂಬವರು ನೀಡಿದ ದೂರಿನ ಮೇರೆಗೆ ತೇಜಸ್, ನಿತಿನ್, ಹೃತಿಕ್, ರಾಜವರ್ಧನ, ಅರುಣ್, ಮಹದೇವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಬೆಂಗಳೂರು, ಹಾಸನ ಸೇರಿ ವಿವಿಧ ಕಡೆಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಆರೋಪಿಗಳು, ಜೈಲಿನಲ್ಲಿರುವ ತಮ್ಮ ಇತರ ಸಹಚರರನ್ನು ಬಿಡಿಸಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಐವರನ್ನು ಒಗ್ಗೂಡಿಸಿ ದರೋಡೆಗೆ ಇಳಿದಿದ್ದರು. ವಯೋವೃದ್ದರು ಇರುವ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಆರೋಪಿಗಳು ಆ.20 ರಂದು ಬೆಳ್ಳಂದೂರಿನ ಎಂಟನೇ ಕ್ರಾಸ್ ಬಳಿ ಲಕ್ಷ್ಮಣ್ ಎಂಬವರ ಮನೆ ಗುರುತಿಸಿ ಬಾಗಿಲು ತಟ್ಟಿದ್ದಾರೆ. ಈ ವೇಳೆ ಯಾರೋ ಪರಿಚಯಸ್ಥರು ಅಂತ ತಿಳಿದ ವೃದ್ದ ಲಕ್ಷ್ಮಣ್ ಬಾಗಿಲು ತೆರೆಯುತ್ತಿದ್ದಂತೆ ಒಳ ನುಗ್ಗಿದ್ದು ದರೋಡೆ ನಡೆಸಿದ್ದಾರೆ.
ಮನೆಗೆ ನುಗಿದ ದರೋಡೆಕೋರರು ಲಕ್ಷ್ಮಣ್ ಅವರನ್ನು ಹಗ್ಗದಿಂದ ಕೈ-ಕಾಲು ಕಟ್ಟಿದ್ದು ಬಾಯಿಗೆ ಪ್ಲಾಸ್ಟರ್ ಹಾಕಿ ಬಾಯಿ ಮುಚ್ಚಿಸಿದ್ದರು. ಶಬ್ದ ಮಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದರು. ನಂತರ ಆರು ಜನ ಆರೋಪಿಗಳು 62 ವರ್ಷದ ವೃದ್ದನ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ 1.40 ಲಕ್ಷ ರೂ. ನಗದು ಹಾಗೂ ಲಕ್ಷಾಂತರ ಬೆಲೆಯ ಚಿನ್ನಾಭರಣ ದೋಚಿದ್ದಾರೆ. ಬೀರು ಒಡೆದ ಶಬ್ಧ ಕೇಳಿ ಪಕ್ಕದ ಮನೆಯಲ್ಲಿ ವಾಸವಿದ್ದ ಸಂಬಂಧಿಕರು ಮನೆ ಬಳಿ ಬರುತ್ತಿದ್ದಂತೆ ಖದೀಮರು ಬ್ಯಾಗಿನಲ್ಲಿ ಹಣ ಹಾಗೂ ಚಿನ್ನಾಭರಣವನ್ನು ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದೇ ವೇಳೆ ಮೂವರು ಆರೋಪಿಗಳು ಚಿನ್ನ ಹಾಗೂ ಹಣದ ಸಮೇತ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಸಫಲವಾಗಿದ್ದಾರೆ.
ಜಾಮೀನಿಗೆ ಹಣ ಹೊಂದಿಸುವಾಗ ಸಿಕ್ಕಿಬಿದ್ದ !
ಹಾಸನದಲ್ಲಿ ವಿವಿಧ ಅಪರಾಧ ಕೃತ್ಯಗಳಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ ಸಹಚರರನ್ನು ಬಿಡಿಸಿಕೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿತ್ತು. ಇದಕ್ಕೆ ದರೋಡೆಗೆ ಪ್ಲ್ಯಾನ್ ಮಾಡಿದ್ದ ತೇಜಸ್, ಹೊಸ ಹುಡುಗರ ತಂಡ ಕಟ್ಟಿದ್ದ. ಕದ್ದ ಚಿನ್ನಾಭರಣವನ್ನು ಮಾರಿ ಜಾಮೀನಿಗೆ ಹಣ ಹೊಂದಿಸಲು ಯೋಜನೆ ಹಾಕಿದ್ದ. ಆದರೆ ರಾಬರಿ ಮಾಡಿ ಪರಾರಿಯಾಗಿದ್ದ ಆರೋಪಿಗಳು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
Bengaluru Police Arrest Robbers Who Theft Old Man Gold and Amount.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm