ಬ್ರೇಕಿಂಗ್ ನ್ಯೂಸ್
13-09-21 11:25 pm Headline Karanataka News ಕ್ರೈಂ
ಯಾದಗಿರಿ, ಸೆ.13: ಮಹಿಳೆಯನ್ನು ನಗ್ನವಾಗಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ಮಹಿಳೆಯೇ ಸ್ವತಃ ಬಂದು ದೂರು ನೀಡಿದ್ದು, ಗ್ಯಾಂಗ್ ರೇಪ್ ಮಾಡಿ ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇದರಂತೆ, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಠಿಣ ಕೇಸುಗಳನ್ನು ಜಡಿದಿದ್ದಾರೆ.
ರಾಸ್ತಾಪುರ ಎಂಬಲ್ಲಿ ಬಸ್ಸಿಗೆ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನಾಲ್ವರು ಕಿಡ್ನಾಪ್ ಮಾಡಿದ್ದು, ಆನಂತರ ಕಬ್ಬಿನ ತೋಟಕ್ಕೆ ಒಯ್ದು ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಮೊಬೈಲ್ ಲೈಟ್ ಹಾಕಿ ವಿಡಿಯೋ ಮಾಡಿದ್ದಾರೆ. ಕಬ್ಬಿನ ದಂಟಿನಲ್ಲಿ ಹೊಡೆದು ಚಿತ್ರಹಿಂಸೆ ನೀಡಿದ್ದಾರೆ. ಬಿಟ್ಟು ಬಿಡುವಂತೆ ಪರಿ ಪರಿಯಾಗಿ ಬೇಡಿಕೊಂಡರೂ ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಪ್ರಕರಣ ಸಂಬಂಧಿಸಿ ಆಟೋ ಚಾಲಕ ನಿಂಗರಾಜು(24), ಅಯ್ಯಪ್ಪ (23), ಭೀಮಾಶಂಕರ್ (28) ಮತ್ತು ಶರಣು (22) ಎಂಬವರನ್ನು ಬಂಧಿಸಿದ್ದಾರೆ. ಅಯ್ಯಪ್ಪ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಭೀಮಾಶಂಕರ್ ಪಾನ್ ಶಾಪ್ ಹೊಂದಿದ್ದ. ಶರಣು ಬೀದಿ ವ್ಯಾಪಾರಿಯಾಗಿದ್ದ. ಆಟೋ ಓಡಿಸುತ್ತಿದ್ದ ನಿಂಗರಾಜು ಈ ಹಿಂದೆ ಹೋಮ್ ಗಾರ್ಡ್ ಆಗಿ ಕೆಲಸ ಮಾಡಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಎಸ್ಐ ಜೀಪಿನಲ್ಲಿ ಚಾಲಕನಾಗಿದ್ದ. ಆನಂತರ ಕೆಲಸ ಬಿಟ್ಟು ಆಟೋ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದ ಹಿಂದೆ ಈ ಘಟನೆ ನಡೆದಿದ್ದು, ವಿಡಿಯೋ ಎರಡು ದಿನಗಳ ಹಿಂದೆ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿರ್ಭಯಾ ಕಾಯ್ದೆಯಡಿ ಮತ್ತು ಯುವತಿಯ ಕಿಡ್ನಾಪ್ ಮತ್ತಿತರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ವೇದಮೂರ್ತಿ, ಪ್ರಕರಣ ನಡೆದಿರುವ ಪ್ರದೇಶದಿಂದಲೇ ಆರೋಪಿಗಳನ್ನು ಬಂಧಿಸಲಾಗಿದೆ. 20 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕಲಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
Yadagiri Woman Gang-raped and tortured one-year-old Video goes viral. Police have arrested Four persons in connection to the case after the woman filed a complaint that she was brutally assaulted and raped in an isolated field.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm