ವಿಧ್ವಂಸಕ ಕೃತ್ಯಕ್ಕೆ ಸಂಚು ; ಬೆಂಗಳೂರು, ಮೈಸೂರಿನಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

17-09-21 01:09 pm       Headline Karnataka News Network   ಕ್ರೈಂ

ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದಾರೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು, ಸೆ.17: ಪಾಕಿಸ್ಥಾನದ ಐಎಸ್ಐ ಬೆಂಬಲದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದ ಆರು ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿತ್ತು ಅನ್ನೋ ಮಾಹಿತಿ ಹೊರಬಿದ್ದಿದೆ.

ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಲರ್ಟ್ ಇರುವಂತೆ ರಾಜ್ಯಕ್ಕೆ ಸಂದೇಶ ರವಾನಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದಾರೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯದ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಭಯೋತ್ಪಾದನೆ ವಿಚಾರದಲ್ಲಿ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಬರುವವರ ಬಗ್ಗೆ ನಿಗಾ ಇರಿಸಿದ್ದೇವೆ. ಪೊಲೀಸರ ಗಸ್ತು ಹೆಚ್ಚಿಸುವುದು ಮತ್ತು ತಪಾಸಣೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಉಗ್ರರ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ಗರುಡ ಪಡೆ ಕಮಾಂಡರ್ ಗಳು ರಾಜಧಾನಿಯಲ್ಲಿದ್ದಾರೆ. ಉಗ್ರರನ್ನು ಎದುರಿಸಲು ನಮ್ಮ ಕಮಾಂಡರ್ ಸಮರ್ಥರಿದ್ದಾರೆ ಎಂದು ಕಮಲ್ ಪಂತ್ ಪ್ರತಿಕ್ರಿಯಿಸಿದ್ದಾರೆ. 

high alert declaration in mysore and bangalore police commissioner kamal pant