ಬ್ರೇಕಿಂಗ್ ನ್ಯೂಸ್
21-09-21 05:43 pm Mangaluru Correspondent ಕ್ರೈಂ
ಪುತ್ತೂರು, ಸೆ.21: ಅನ್ಯಕೋಮಿನ ವ್ಯಕ್ತಿಗಳ ಜೊತೆ ಮಹಿಳೆಯೊಬ್ಬರು ಲಾಡ್ಜ್ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಲಾಡ್ಜ್ ಮೇಲೆ ದಾಳಿ ನಡೆಸಿ, ಮಹಿಳೆ ಮತ್ತು ಆಕೆಯ ಜೊತೆಗಿದ್ದವರ ಮೇಲೆ ಹಲ್ಲೆ ಎಸಗಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳಿಂದ ಬೆಂಗಳೂರು ಮೂಲದ ಮಹಿಳೆ ರಾಜೇಶ್ವರಿ(36) ಎಂಬವರು ತಂಗಿದ್ದರು. ಇತ್ತೀಚೆಗೆ ಅಪಘಾತದಲ್ಲಿ ಪೊಲೀಸ್ ಕೇಸು ದಾಖಲಾಗಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದ ಕಾರನ್ನು ಬಿಡಿಸಿಕೊಳ್ಳಲು ಮಹಿಳೆ ಬಂದಿದ್ದರು. ಇದಕ್ಕಾಗಿ ಬೆಂಗಳೂರಿನಿಂದ ತನ್ನ ಸಹೋದ್ಯೋಗಿ ಆಗಿರುವ ಮಂಗಳೂರು ಉಳ್ಳಾಲ ನಿವಾಸಿ ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಎಂಬವರನ್ನು ಜೊತೆಗೆ ಕರೆತಂದಿದ್ದರು.
ಸೆ.17 ರಂದು ಬೆಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಪುತ್ತೂರಿಗೆ ಬಂದಿದ್ದು, ಲಾಡ್ಜ್ನಲ್ಲಿ ತಂಗಿದ್ದರು. ಕೋರ್ಟ್ ಕೇಸು ಇದ್ದುದರಿಂದ ಕಾರನ್ನು ಬಿಡಿಸಿಕೊಳ್ಳುವುದು ಸಾಧ್ಯವಾಗದೇ ಎರಡು ದಿನಗಳಿಂದ ಉಳಿದಿದ್ದರು. ಆದರೆ, ಹಿಂದು ಮಹಿಳೆಯ ಜೊತೆ ಅನ್ಯಕೋಮಿನ ಪುರುಷರು ಲಾಡ್ಜ್ನಲ್ಲಿ ತಂಗಿದ್ದಾರೆ ಎನ್ನುವ ಮಾಹಿತಿ ಪಡೆದ ಪುತ್ತೂರಿನ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೋಮವಾರ ತಡರಾತ್ರಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದು ಮಹಿಳೆ ಹಾಗೂ ಆಕೆಯ ಜೊತೆಗಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೂ ಮಾಹಿತಿ ನೀಡಿದ್ದು, ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆ ಹಾಗೂ ಆಕೆಯ ಜೊತೆಗಿದ್ದವರನ್ನು ಪೊಲೀಸ್ ಠಾಣೆಗೆ ಕರೆಸಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಮಹಿಳೆ ಬಳಿಕ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದಾಗ ಹಲ್ಲೆ ನಡೆಸಿದ್ದು ಅಶ್ಲೀಲವಾಗಿ ನಿಂದಿಸಿ ಫೋಟೊ ತೆಗೆದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅದರಂತೆ, ಘಟನೆ ಸಂಬಂಧ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
Puttur HJV activists assault Woman who was with Muslim guy in lodge. In connection to this the Puttur police have arrested two members of Hindu Jagrana Vedike
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm