ಬ್ರೇಕಿಂಗ್ ನ್ಯೂಸ್
29-09-21 03:10 pm Headline Karnataka News Network ಕ್ರೈಂ
ಬೆಂಗಳೂರು, ಸೆ. 29: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದ ಯುವಕನನ್ನು ಠಾಣೆಯಲ್ಲಿಯೇ ಪೊಲೀಸ್ ಪೇದೆಯೊಬ್ಬ ದೊಣ್ಣೆಯಿಂದ ಮನಬಂದಂತೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಗ್ರಾಮಾಂತರ ಜಿಲ್ಲಾ ಪೊಲೀಸರ ಮಾನ ಬೀದಿಯಲ್ಲಿ ಹರಾಜು ಹಾಕಿದೆ.
ಪೊಲೀಸರ ದೌರ್ಜನ್ಯ ಸಂಬಂಧ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನಂತೆ ಕಾಣುವ ಯುವಕನ ಬಟ್ಟೆ ಬಿಚ್ಚಿಸಿ ಕಿಟಕಿ ಮುಂದೆ ನಿಲ್ಲಿಸಿ ದೊಣ್ಣೆಯಿಂದ ಕುಂಡೆ ಮೇಲೆ ವಿಕೃತವಾಗಿ ಹಲ್ಲೆ ಮಾಡಿ ಆ ಬಳಿಕ ಕೂರಿಸಿ ಪಾದಕ್ಕೆ ವಿಕೃತವಾಗಿ ಬಾರಿಸಿದ್ದಾನೆ. ಆತ ಕಾಲಿಗೆ ಬಿದ್ದು ಬೇಡಿಕೊಂಡರೂ ಪೇದೆ ತನ್ನ ದರ್ಪ ಮುಂದುವರೆಸಿದ್ದಾನೆ.

ಯಾವುದೇ ಆರೋಪಿಯನ್ನು ವಶಕ್ಕೆ ಪಡೆದರೆ ವಿಚಾರಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ಪೊಲೀಸರು ಹಲ್ಲೆ ಮಾಡುವ ವಿಡಿಯೋ ನೋಡಿದರೆ ಎಂಥವರಿಗೂ ಪೊಲೀಸರ ಮೇಲೆ ಸಿಟ್ಟು ಬರುತ್ತೆ. ಪದೇಪದೆ ಬೇಡಿಕೊಂಡರೂ ದೊಣ್ಣೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ವಿಡಿಯೋ ನೋಡುಗರನ್ನೇ ಬೆಚ್ಚಿ ಬೀಳಿಸುತ್ತದೆ. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವಾ ಎಂಬ ಪ್ರಶ್ನೆ ಕಾಡುತ್ತದೆ. ಇನ್ನು ಈ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣರೆಡ್ಡಿ ಪಕ್ಷದ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.
ವಿಚಾರಣೆ ನೆಪದಲ್ಲಿ ಯುವಕನನ್ನು ಕರೆತಂದು ವಿಕೃತವಾಗಿ ಹಲ್ಲೆ ಮಾಡುವ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಮಾನವ ಹಕ್ಕು ಅಯೋಗದ ಸದಸ್ಯ ಆರ್.ಕೆ. ದತ್ತಾ ಅವರು, ''ಹೆಬ್ಬಗೋಡಿ ಪೊಲೀಸರು ಹಲ್ಲೆ ಮಾಡುವ ಈ ಕೃತ್ಯದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಡಾ. ಕೋನಾ ವಂಶಿ ಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
Youth brutally beaten by Police constable of Hebbagodi Police station Human right case registered. The video of their has gone viral on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am