ಬ್ರೇಕಿಂಗ್ ನ್ಯೂಸ್
30-09-21 09:52 pm Mangaluru Correspondent ಕ್ರೈಂ
ಮಂಗಳೂರು, ಸೆ.30: ಆರು ವರ್ಷಗಳ ಹಿಂದೆ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ ಆರೋಪಿಗೆ ಮಂಗಳೂರಿನ ತ್ವರಿತಗತಿ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಶಿವಮೊಗ್ಗ ಮೂಲದ ರಾಜು ಯಾನೆ ರಾಜ (36) ಶಿಕ್ಷೆಗೊಳಗಾದ ಅಪರಾಧಿ. ಆರೋಪಿ ರಾಜು ಯಾನೆ ರಾಜ ಸಂತ್ರಸ್ತ ಬಾಲಕಿಯ ಸಂಬಂಧಿಕ. ಆತ ಮತ್ತು ಸಂತ್ರಸ್ತ ಬಾಲಕಿ, ಬಾಲಕಿಯ ತಾಯಿ ಮತ್ತು ಹಿರಿಯ ಸಹೋದರಿ 2015ರಲ್ಲಿ ಶಿವಮೊಗ್ಗದಿಂದ ಮಂಗಳೂರಿಗೆ ಬಂದು ಬಿಕರ್ನಕಟ್ಟೆ ಕೈಕಂಬದ ಬಳಿ ಒಂದೇ ಮನೆಯಲ್ಲಿ ವಾಸವಾಗಿದ್ದರು.
2015ರ ಸೆಪ್ಟಂಬರ್ ತಿಂಗಳಲ್ಲಿ ಬಾಲಕಿಯ ತಾಯಿ ಕೂಲಿ ಕೆಲಸಕ್ಕೆ ಹಾಗೂ ಹಿರಿಯ ಸಹೋದರಿ ಶಾಲೆಗೆ ಹೋಗಿದ್ದರು. ಈ ವೇಳೆ ಸಂತ್ರಸ್ತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ರಾಜು ಆಕೆಯನ್ನು ಬಲಾತ್ಕರಿಸಿ ಅತ್ಯಾಚಾರ ಎಸಗಿದ್ದನು. ಆ ಬಳಿಕ ಪದೇಪದೇ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
2015ರ ಡಿಸೆಂಬರ್‌ನಲ್ಲಿ ಆಕೆ ಹೊಟ್ಟೆ ನೋವು ಎಂದು ಹೇಳಿದ್ದಳು. ಈ ವೇಳೆ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಬಾಲಕಿ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ನಗರದ ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ರಾಜು ವಿರುದ್ಧ ಪೊಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಾಗಿತ್ತು.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ನಡುವೆ ಬಾಲಕಿಗೆ ಗರ್ಭಪಾತವಾಗಿದ್ದು, ಡಿಎನ್‌ಎ ಪರೀಕ್ಷೆಯಲ್ಲಿ ಆಕೆ ಗರ್ಭವತಿಯಾಗಲು ಆರೋಪಿ ರಾಜು ಕಾರಣ ಎಂದು ಸಾಬೀತಾಗಿತ್ತು. ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಕಲಾವತಿ ತನಿಖೆ ನಡೆಸಿ, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಐಪಿಸಿ 376 (ಅತ್ಯಾಚಾರ) ಅನ್ವಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಕಠಿಣ ಜೈಲು ಶಿಕ್ಷೆ, ಐಪಿಸಿ 506 (ಕೊಲೆ ಬೆದರಿಕೆ) ಅನ್ವಯ 1 ವರ್ಷ ಕಠಿಣ ಶಿಕ್ಷೆ ಮತ್ತು 1000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಕಠಿನ ಸಜೆ, ಪೋಕ್ಸೊ ಕಾಯ್ದೆಯ ಸೆಕ್ಷನ್ 6 ರನ್ವಯ 10 ವರ್ಷ ಕಠಿಣ ಸಜೆ ಮತ್ತು 10,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಕಠಿಣ ಶಿಕ್ಷೆ ಅನುಭವಿಸಬೇಕು. ಇದಲ್ಲದೆ, ಸಂತ್ರಸ್ತ ಬಾಲಕಿಗೆ ಸರಕಾರದಿಂದ ಮೂರು ಲಕ್ಷ ರೂ. ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಾಧೀಶರು ಆದೇಶಿದ್ದಾರೆ.
ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು. 10 ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
Mangalore Girl raped accused of Shivamogga sentenced to 10 years of rigours punishment by court. The case was filed against him in 2015. The accused is identified as Raj (35).
26-12-24 11:39 pm
Bangalore Correspondent
Bidar Contractor Suicide, Priyank Kharge: ಪ್ರ...
26-12-24 08:03 pm
ಹೆಚ್ಚು ಮೊಬೈಲ್ ನೋಡ್ಬೇಡ ಎಂದು ಬುದ್ಧಿ ಹೇಳಿದ್ದ ತಾಯ...
26-12-24 05:11 pm
Bangalore Case, Advocate Dhahina Bhanu, Fraud...
26-12-24 04:45 pm
MLA Munirathna Egg Attack: ಶಾಸಕ ಮುನಿರತ್ನ ಮೇಲೆ...
25-12-24 10:50 pm
27-12-24 10:15 am
HK News Desk
Dr Manmohan Singh, passes away: ಮಾಜಿ ಪ್ರಧಾನಿ,...
26-12-24 11:15 pm
Ajay Bhalla, Arif Khan: ಗಲಭೆ ಪೀಡಿತ ಮಣಿಪುರಕ್ಕೆ...
25-12-24 04:21 pm
Mohan Bhagwat: ಮೋಹನ್ ಭಾಗವತ್ ಸಂಘವನ್ನು ನಡೆಸುತ್ತ...
24-12-24 09:17 pm
ಕಾಸರಗೋಡಿನಲ್ಲಿ ಅಲ್ ಖೈದಾ ಉಗ್ರರ ಸ್ಲೀಪರ್ ಸೆಲ್ ರಚಿ...
23-12-24 05:23 pm
26-12-24 11:18 pm
Mangalore Correspondent
Mangalore Kambala 2024, MP Brijesh Chowta: ಡಿ...
26-12-24 09:39 pm
Anoop Poojary, Udupi: ಹವಾಲ್ದಾರ್ ಅನೂಪ್ ಪೂಜಾರಿ...
26-12-24 07:07 pm
Mangalore, Martyr Anoop Poojary, Mp Brijesh C...
26-12-24 11:57 am
DJ artist Sajanka, Mangalore, New Year Party:...
25-12-24 10:55 pm
26-12-24 07:41 pm
Bangalore Correspondent
Fake Gold Loan, Mangalore Samaja seva sahakar...
25-12-24 02:41 pm
ಸೈಬರ್ ವಂಚಕರ ನಕಲಿ ಷೇರು ಮಾರುಕಟ್ಟೆ ಜಾಲ ; ಕೇರಳದಲ್...
24-12-24 11:05 pm
Bangalore cyber fraud, Crime: ಬೆಂಗಳೂರಿನ ಸಾಫ್ಟ...
22-12-24 07:23 pm
Mangalore Police, Cyber Fraud: ಕಮಿಷನ್ ಆಸೆಗೆ ಬ...
22-12-24 04:44 pm