ಬ್ರೇಕಿಂಗ್ ನ್ಯೂಸ್
02-10-21 10:51 pm Mangaluru Correspondent ಕ್ರೈಂ
ಮಂಗಳೂರು, ಅ.2: ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯ ಫೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಲ್ಲದೆ ಆಕೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಆಂಧ್ರಪ್ರದೇಶ ಮೂಲದ ಪ್ರಾಧ್ಯಾಪಕನನ್ನು ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ.
ವಿದ್ಯಾರ್ಥಿನಿ 2019ರಿಂದ ಮಂಗಳೂರಿನ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮಾಡುತ್ತಿದ್ದರು. ಇದಕ್ಕೂ ಮುನ್ನ 2018ರಲ್ಲಿ ಪರಿಚಯವಾಗಿದ್ದ ಆರೋಪಿ ಡಾ.ಕೊಂಡೂರು, ತನ್ನನ್ನು ಮಾರ್ಗದರ್ಶಕನನ್ನಾಗಿ ಮಾಡಿಕೊಳ್ಳುವಂತೆ ವಿದ್ಯಾರ್ಥಿನಿಯಲ್ಲಿ ಒತ್ತಾಯಿಸಿದ್ದ. ಅದಕ್ಕೆ ಒಪ್ಪಿ ವಿಶ್ವವಿದ್ಯಾನಿಲಯಕ್ಕೆ ಅನುಮತಿಗಾಗಿ ಕಳುಹಿಸಿದ್ದು ಆ ವ್ಯಕ್ತಿಗೆ ಅರ್ಹತೆಯಿಲ್ಲ ಎನ್ನುವ ಕಾರಣಕ್ಕೆ ಕೋರಿಕೆಯನ್ನು ನಿರಾಕರಿಸಲಾಗಿತ್ತು. ಇದಾದ ಬಳಿಕ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಮತ್ತು ಆಕೆಯ ಮನೆಯವರಿಗೆ ಕಿರುಕುಳ ನೀಡಲು ಆರಂಭಿಸಿದ್ದ.
ಈ ನಡುವೆ, ವಿದ್ಯಾರ್ಥಿನಿಗೆ ತಿಳಿಯದಂತೆ ಆಕೆಯ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮನೆಯವರು ಮಂಗಳೂರಿನ ಸೈಬರ್ ಠಾಣೆಗೆ 2021ರ ಮಾರ್ಚ್ 10ರಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನಿನಲ್ಲಿ ಬಿಡುಗಡೆಗೊಳಿಸಿದೆ.
Mangalore Sexual Harassment to girl over Phone Calls Andhra Pradesh Professor arrested by Cyber police. The arrested has been idemtoef as Dr Kondoor Sudheer Kumar from Guntur who claims to be a professor at Acharya Nagarjuna University in Andhra.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm