ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
22-10-25 04:30 pm
Mangalore Correspondent
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm