ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ ; 10 ಲಕ್ಷ ಮೌಲ್ಯದ ಗಾಂಜಾ ವಶ, ಇಬ್ಬರ ಬಂಧನ !

09-10-21 06:52 pm       Headline Karnataka News Network   ಕ್ರೈಂ

ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, ಅ.9:  ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತ ಯುವ ಪೀಳಿಗೆಗೆ ಮಾರಕವಾಗಿದ್ದಂತಹ ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಎಚ್‍ಎಸ್‍ಆರ್ ಲೇಔಟ್ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಹಾಗೂ 3 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.

ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಯುವ ಜನಾಂಗವನ್ನು ತಪ್ಪುದಾರಿಗೆಳೆಯುತ್ತಿರುವ ಡ್ರಗ್ ಪೆಡ್ಲರ್‍ಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಇಬ್ಬರು ಅಂತಾರಾಜ್ಯ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 2.50 ಲಕ್ಷ ರೂ. ಬೆಲೆಯ 3 ಕೆಜಿ 750 ಗ್ರಾಂ ಗಾಂಜಾ, 4.50 ಲಕ್ಷ ಬೆಲೆಯ 300 ಎಂಡಿಎಂಎ ಮಾತ್ರೆಗಳು, 3 ಲಕ್ಷ ರೂ. ಬೆಲೆಯ ಹೆರಾಯಿನ್ ಹಾಗೂ ಮಾದಕ ವಸ್ತು ಮಾರಾಟ ಮಾಡಿ ಸಂಪಾದಿಸಿದ್ದ 3 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ.

ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ, ಸಹಾಯಕ ಪೊಲೀಸ್ ಆಯುಕ್ತ ಸುೀರ್ ಹೆಗಡೆ ಮಾರ್ಗದರ್ಶನದಲ್ಲಿ ಎಚ್‍ಎಸ್‍ಆರ್ ಲೇಔಟ್ ಠಾಣೆ ಇನ್ಸ್‍ಪೆಕ್ಟರ್ ಮುನಿರೆಡ್ಡಿ, ಪಿಎಸ್‍ಐ ಕುಮಾರ್ ಮುಕನವರ್, ಎಎಸ್‍ಐ ಶರಣಪ್ಪ ವಣಗೇರಿ ಅವರನ್ನೊಳಗೊಂಡ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯದ ಬಗ್ಗೆ ಮೇಲಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

HSR Layout police arrested two accused of Kerala and Manipur and seized Rs 10 lakh worth of marijuana, MDMA tablets, heroin and 3000 rupees.