ಬ್ರೇಕಿಂಗ್ ನ್ಯೂಸ್
13-10-21 08:37 pm Bengaluru Correspondent ಕ್ರೈಂ
ಬೆಂಗಳೂರು, ಅ.13: ಫೇಸ್ಬುಕ್ ಮೂಲಕ ಯುವತಿಯರ ಜೊತೆ ಸಂಪರ್ಕ ಬೆಳೆಸಿ, ನಗ್ನ ವಿಡಿಯೋ ಪಡೆದುಕೊಂಡು ಬ್ಲಾಕ್ಮೇಲ್ ನಡೆಸುತ್ತಿದ್ದ ಪ್ರಕರಣದಲ್ಲಿ ರಾಜಸ್ಥಾನ ಮೂಲದ ನಾಲ್ವರನ್ನು ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಾಕಿರ್, ಪಹರಿ, ಕಸಮ್ ಖಾನ್, ಜಾಮಿಲ್ ಖಾನ್ ಎಂದು ಗುರುತಿಸಲಾಗಿದೆ. ದೂರಿಗೆ ಸಂಬಂಧಿಸಿ, ಇನ್ ಸ್ಪೆಕ್ಟರ್ ನಯಾಜ್ ಅಹ್ಮದ್ ನೇತೃತ್ವದ ಬೆಂಗಳೂರು ಪೊಲೀಸರು ರಾಜಸ್ಥಾನದ ಭರತ್ ಪುರ, ಆಲ್ವಾರ್ ಮತ್ತಿತರ ಪ್ರದೇಶಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದರು. ಆಲ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮತ್ತು ಬೈತಕೂಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಿಬ್ಬರನ್ನು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಯುವತಿಯರನ್ನು ಲೈಂಗಿಕ ಶೋಷಣೆ ನಡೆಸುತ್ತಿದ್ದ ಆರೋಪದಲ್ಲಿ ಸೈಬರ್ ಕ್ರೈಮ್
ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ರಾಜಸ್ಥಾನ ಮತ್ತು ಹರ್ಯಾಣದಲ್ಲಿ ಹಲವರನ್ನು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿಗಳು ಫೇಸ್ಬುಕ್ ಮತ್ತು ಇನ್ ಸ್ಟಾ ಗ್ರಾಮ್ ಬಳಕೆದಾರರನ್ನು ಗುರಿಯಾಗಿಸಿ ಖಾಸಗಿ ಮಾಹಿತಿ ಪಡೆದು ಗಾಳ ಹಾಕುತ್ತಿದ್ದರು ಅನ್ನೋದು ಬೆಳಕಿಗೆ ಬಂದಿದೆ.
ಯುವತಿ ಹೆಸರಿನಲ್ಲೇ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಗೆಳೆತನ ಮಾಡುತ್ತಿದ್ದ ಇವರು ಚಾಟಿಂಗ್ ಮಾಡಿ ನಂಟು ಬೆಳೆಸುತ್ತಿದ್ದರು. ಆನಂತರ ವಾಟ್ಸಪ್, ವಿಡಿಯೋ ಕರೆ ಮಾಡಿ, ನಗ್ನ ವಿಡಿಯೋ ತೋರಿಸಲು ಹೇಳಿ ಅದನ್ನು ಅವರಿಗೆ ತಿಳಿಯದಂತೆ ರೆಕಾರ್ಡ್ ಮಾಡುತ್ತಿದ್ದರು. ಆನಂತರ ಸಂತ್ರಸ್ತ ಯುವತಿಯರನ್ನು ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಹೇಳಿ, ಬೆದರಿಸಿ ಹಣ ಕೀಳುತ್ತಿದ್ದರು. ಈ ರೀತಿಯ ಯಾವುದೇ ದೂರುಗಳಿದ್ದವಲ್ಲಿ ಅಥವಾ ಸಂತ್ರಸ್ತರು ಶೋಷಣೆಗೆ ಒಳಗಾಗಿದ್ದಲ್ಲಿ ಸೈಬರ್ ಕ್ರೈಮ್ ಗೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
The Karnataka Cyber Crime Division has arrested four persons involved in extortion after recording nude videos of the victims by becoming friends on social media platforms, an official statement said on Tuesday. The arrested persons were identified as Sakir, Pahari, Kasam Khan, Jamil Khan.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm