ಬ್ರೇಕಿಂಗ್ ನ್ಯೂಸ್
17-10-21 11:51 am Headline Karnataka News Network ಕ್ರೈಂ
ಬೆಂಗಳೂರು, ಅ.17: ಬೆಂಗಳೂರಿಗೆ ಹೊರಟಿದ್ದ ಟ್ರಕ್‌ನಿಂದ 7 ಕೋಟಿ ರೂಪಾಯಿ ಮೌಲ್ಯದ ಸುಮಾರು 9,000 ಮೊಬೈಲ್ ಫೋನ್‌ಗಳನ್ನು ಲೂಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ಹೊರಕ್ಕೆ ಎಸೆದು ಮೊಬೈಲ್ ಲೂಟಿ ಮಾಡಿದ್ದಾರೆ.
ಒಪ್ಪೋ ಮೊಬೈಲ್ ಕಂಪನಿಯ ಮ್ಯಾನೇಜರ್ ಸಚಿನ್ ಮಾನವ್ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅವರು ಅಕ್ಟೋಬರ್ 5 ರಂದು ಬೆಳಗ್ಗೆ ಗ್ರೇಟರ್ ನೋಯ್ಡಾದಿಂದ ಮೊಬೈಲ್‌ಗಳನ್ನು ತುಂಬಿದ್ದ ಟ್ರಕ್ ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು. ಗ್ವಾಲಿಯರ್ ಬೈಪಾಸ್‌ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನು ಹತ್ತಿದ್ದಾರೆ.
ಟ್ರಕ್ ಝಾನ್ಸಿಯ ಬಬಿನಾ ಟೋಲ್ ಅನ್ನು ದಾಟಿದ ತಕ್ಷಣ, ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ವಾಹನದಿಂದ ಹೊರಗೆ ಎಸೆದು ಟ್ರಕ್‌ನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಬಳಿಕ ಶಿಯೋಪುರ್ ಜಿಲ್ಲೆಯ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಖಾಲಿ ಟ್ರಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ನೀಡಲು ಮಧ್ಯಪ್ರದೇಶ ಪೊಲೀಸರನ್ನು ಸಂಪರ್ಕಿಸಿದ್ದು, ದೂರು ದಾಖಲಿಸಿಕೊಳ್ಳಲು ಅವರು ನಿರಾಕರಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ. ಬಳಿಕ, ಆಗ್ರಾದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದವರು ಹೇಳಿದ್ದಾರೆ.
ಸದ್ಯ, ಮಧ್ಯಪ್ರದೇಶದ ಮಾನ್ಪುರ್ ಪೊಲೀಸರ ವಶದಲ್ಲಿ ಟ್ರಕ್ ಇದೆ. ಟ್ರಕ್‌ನಲ್ಲಿ ರಿಯಾಲಿಟಿ ಮತ್ತು ಒಪ್ಪೊ ಕಂಪನಿಯ 8,990 ಮೊಬೈಲ್ ಫೋನ್‌ಗಳಿದ್ದವು. ಅವುಗಳ ಮೌಲ್ಯ ಸುಮಾರು ₹7 ಕೋಟಿ ಎಂದು ಎಸ್‌ಪಿ ತಿಳಿಸಿದ್ದಾರೆ.
Unidentified people looted nearly 9,000 mobile phones worth ₹ 7 crore from a Bengaluru-bound truck and allegedly attacked the driver by beating him up and throwing him out of the vehicle, police in Uttar Pradesh's Mathura said on Saturday. The incident took place on October 5 in Madhya Pradesh's Sheopur district but a case was registered in Uttar Pradesh's Mathura.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm