ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm