ಬ್ರೇಕಿಂಗ್ ನ್ಯೂಸ್
20-10-21 05:23 pm Headline Karnataka News Desk ಕ್ರೈಂ
ಮುಂಬೈ, ಅ 20: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ.
"ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು ಆದೇಶ ಪ್ರತಿ ಸಿಗದಿದ್ದರೆ ಗುರುವಾರ ಉಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು," ಎಂದು ಆರ್ಯನ್ ಖಾನ್ ಪರ ವಕೀಲರು ತಿಳಿಸಿದ್ದಾರೆ.
ಆರ್ಯನ್ ಖಾನ್ ಪರ ವಕೀಲರು ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ನಂತರದಲ್ಲಿ ಎನ್ ಸಿಪಿ ಪರ ವಕೀಲರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸುತ್ತದೆ. ಎನ್ ಸಿಬಿ ಆಕ್ಷೇಪಣೆ ಸಲ್ಲಿಸಿದ ನಂತರದಲ್ಲಿ ವಿಚಾರಣೆ ನಡೆಸಲಿರುವ ಹೈಕೋರ್ಟ್ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಆರ್ಯನ್ ಖಾನ್ ಬಂಧನದ ಬಗ್ಗೆ ಪ್ರಶ್ನೆ: ಕಳೆದ ಅಕ್ಟೋಬರ್ 14ರಂದು ಮುಂಬೈನ ವಿಶೇಷ NDPS ಕೋರ್ಟ್ ಪ್ರಕರಣರಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತ್ತು. ಈ ಹಿಂದೆ ಆರ್ಯನ್ ಖಾನ್ ಪರ ಹಿರಿಯ ವಕೀಲ ಅಮಿತ್ ದೇಸಾಯಿ, 'ಅರಬ್ಬಿ ಸಮುದ್ರದಲ್ಲಿ ತೇಲುತ್ತಿದ್ದ ಕ್ರೂಸರ್ ಶಿಪ್‌ನಲ್ಲಿ ನಿಗದಿತ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿದ್ದ ಆರ್ಯನ್ ಖಾನ್ ಡ್ರಗ್ ಸಾಗಿಸಿಲ್ಲ, ಡ್ರಗ್ಸ್ ಹೊಂದಿರಲಿಲ್ಲ, ವಿದೇಶಿ ಕರೆನ್ಸಿ ಜಪ್ತಿಯಾಗಿಲ್ಲ, ಹೀಗಿದ್ದು, ನನ್ನ ಕಕ್ಷಿದಾರರ ಬಂಧನವೇಕೆ?,'' ಎಂದು ವಾದಿಸಿದ್ದರು.
ಕಳೆದ ಅಕ್ಟೋಬರ್ 4ರಂದು ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರೆ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಅಕ್ಟೋಬರ್ 7ರವರೆಗೆ ಆರೋಪಿಗಳನ್ನು ಮೊದಲಿಗೆ ಎನ್‌ಸಿಬಿ ಕಸ್ಟಡಿಗೆ ನೀಡಿತ್ತು. ಅಕ್ಟೋಬರ್ 8ರಂದು ಆರ್ಯನ್ ಖಾನ್ ರನ್ನು ಅರ್ಥರ್ ರಸ್ತೆಯ ಜೈಲಿನಲ್ಲಿ ಕೊವಿಡ್-19 ಮಾರ್ಗಸೂಚಿಯಂತೆ ಇರಿಸಲು ಕೋರ್ಟ್ ಸೂಚನೆ ನೀಡಿತ್ತು.
A special Mumbai court today rejected the bail application filed by Aryan Khan, the 23-year-old son of Bollywood superstar Shah Rukh Khan in the drugs-on-cruise case. Aryan Khan was arrested hours after Narcotics Control Bureau officers raided a Mumbai cruise ship party in disguise on October 2. Seven others, including his friend Arbaaz Merchant, were arrested on October 3.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm