ಬ್ರೇಕಿಂಗ್ ನ್ಯೂಸ್
22-10-21 02:17 pm Mangalore Reporter ಕ್ರೈಂ
ಕಾರವಾರ, ಅ.21 : ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಭಟ್ಕಳದಲ್ಲಿ ಉಗ್ರಗಾಮಿ ವ್ಯಕ್ತಿಯ ಪತ್ನಿಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಟ್ಕಳದ ಜಾಲಿ ಕ್ರಾಸ್ ನಿವಾಸಿ, ಉಗ್ರಗಾಮಿ ಸದ್ದಾಂ ಹುಸೇನ್ ಎಂಬಾತನ ಪತ್ನಿ ಸಾಯಿರಾಳನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹದಿನೈದು ದಿನದ ಹಿಂದೆ ಶಿವಮೊಗ್ಗ ಮೂಲದ ಶರತ್ ಎಂಬ ಉದ್ಯಮಿಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆ ಬಂದಿತ್ತು. ಹೆಬ್ಬೆಟ್ ಮಂಜನ ಹೆಸರಿನಲ್ಲಿ ಉದ್ಯಮಿಗೆ ಆನ್‌ಲೈನ್ ಕರೆ ಮಾಡಿದ್ದ ದುಷ್ಕರ್ಮಿಗಳು, ಹಣಕ್ಕಾಗಿ ಜೀವ ಬೆದರಿಕೆಯೊಡ್ಡಿದ್ದರು.
ದುಷ್ಕರ್ಮಿಗಳ ಕರೆಗೆ ಹೆದರಿ ಉದ್ಯಮಿ ಶರತ್ ಈ ಹಿಂದೆ ಸುಮಾರು 1 ಲಕ್ಷ ರೂ. ವರೆಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಮತ್ತಷ್ಟು ಹಣಕ್ಕಾಗಿ ಟಾರ್ಚರ್ ಕೊಟ್ಟಿದ್ದರಿಂದ ಉದ್ಯಮಿ ಪೊಲೀಸರ ಮೊರೆ ಹೋಗಿದ್ದರು. ದುಷ್ಕರ್ಮಿಗಳು ಹಣ ವರ್ಗಾವಣೆ ಮಾಡಲು ನೀಡಿದ್ದ ಖಾತೆಯನ್ನು ಪರಿಶೀಲಿಸಿದಾಗ ಭಟ್ಕಳದ ಲಿಂಕ್ ಬೆಳಕಿಗೆ ಬಂದಿತ್ತು.
ದುಷ್ಕರ್ಮಿಗಳು ಭಟ್ಕಳದ ಸಾಯಿರಾಳ ಖಾತೆಯ ವಿವರ ನೀಡಿದ್ದರು. ಖಾತೆಯ ಮಾಹಿತಿ ಆಧರಿಸಿ ತನಿಖೆ ಪ್ರಾರಂಭಿಸಿದ್ದ ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು ಭಟ್ಕಳದ ಸಾಯಿರಾಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಿಂದ ಭಟ್ಕಳಕ್ಕೆ ಬಂದಿದ್ದ ಶಿವಮೊಗ್ಗ ಸೈಬರ್ ಅಪರಾಧ ಠಾಣಾ ಪೊಲೀಸರು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ದಿದ್ದಾರೆ. ಶಿವಮೊಗ್ಗದ ಉದ್ಯಮಿಗೆ ಬೆಂಗಳೂರಿನಿಂದ ಆನ್‌ಲೈನ್ ಕರೆ ಹೋಗಿತ್ತೆನ್ನಲಾಗಿದ್ದು, ಈ ಬಗ್ಗೆ ಪೊಲೀಸರ ಬಲವಾದ ಸಂಶಯದಿಂದ ತಂಡ ರಚಿಸಿ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಹಿಂದೆ ಬೃಹತ್ ಜಾಲವಿರುವುದರಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಯಾರು ಈ ಸದ್ದಾಂ ಹುಸೇನ್?
2015ರಲ್ಲಿ ಬೆಂಗಳೂರಿನ ಪುಲಕೇಶಿ ನಗರ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಯಾಗಿರುವ ಉಗ್ರಗಾಮಿ ಸದ್ದಾಂ ಹುಸೇನ್, ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಈತ 35 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿ ನಗರ ವ್ಯಾಪ್ತಿಯಲ್ಲಿ ಕುಟುಂಬ ಸಮೇತ ಮನೆ ಮಾಡಿಕೊಂಡು ವಾಸಿಸುತ್ತಿದ್ದ.
ಸ್ಥಳೀಯವಾಗಿ ಗುಜರಿ ವ್ಯಾಪಾರಿಯಂತೆ ಗುರುತಿಸಿಕೊಂಡಿದ್ದ ಈತ, ಬಾಂಬ್ ತಯಾರಿಸಲು ಜಿಲೆಟಿನ್‌ಗಳನ್ನು ಪೂರೈಸುತ್ತಿದ್ದ. ಸಿಸಿಬಿ ಪೊಲೀಸರು 2015ರಲ್ಲಿ ಭಟ್ಕಳದಲ್ಲಿ ಈತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಉಗ್ರ ಸಂಘಟನೆಗಳ ಸಂಬಂಧದ ಬಗ್ಗೆ ಬಾಯ್ಬಿಟ್ಟಿದ್ದ.
ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಸದ್ದಾಂ ಹುಸೇನ್ ಕಂಬಿ ಎಣಿಸುತ್ತಿದ್ದಾನೆ. ಸದ್ದಾಂಗೆ ಪತ್ನಿ ಸಾಯಿರಾ ಹಾಗೂ ಮೂವರು ಮಕ್ಕಳಿದ್ದರು. ತಂದೆ, ತಾಯಿ, ತಂಗಿಯರು ಕೂಡ ಭಟ್ಕಳದಲ್ಲೇ ವಾಸ ಮಾಡುತ್ತಿದ್ದಾರೆ.
The wife of a militant in Bhatkal has been arrested by the Shimoga Cyber Station police in connection with a life-threatening case of a businessman from Shimoga district.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm