ಬ್ರೇಕಿಂಗ್ ನ್ಯೂಸ್
07-11-21 10:40 am Mangaluru Correspondent ಕ್ರೈಂ
ಪುತ್ತೂರು, ನ.7: ಉಪ್ಪಿನಂಗಡಿ ಬಳಿಯ ಇಳಂತಿಲ ಗ್ರಾಮದ ಗುಡ್ಡದಲ್ಲಿ ಹ್ಯಾಂಡ್ ಗ್ರೆನೇಡ್ ಮಾದರಿಯ ಬಾಂಬ್ ಪತ್ತೆಯಾಗಿದ್ದು ಇದನ್ನು ಗಮನಿಸಿದ ನಿವೃತ್ತ ಸೈನಿಕರೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದಾರೆ.
ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡುಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಪರಿಸರದಲ್ಲಿ ಹರಡಿಕೊಂಡ ರೀತಿ ಬಿದ್ದಿತ್ತು.
ಜಯಕುಮಾರ್ ಭಾರತೀಯ ಸೇನೆಯ ಭೂಸೇನಾ ರೆಜಿಮೆಂಟಿನಲ್ಲಿ ಎಸ್ ಸಿ ಓ ಆಗಿ ನಿವೃತ್ತಿ ಹೊಂದಿದ್ದು ಆ ವಸ್ತುಗಳನ್ನು ನೋಡಿ ಗ್ರೆನೇಡ್ ಎಂಬುದನ್ನು ಕಂಡುಕೊಂಡಿದ್ದಾರೆ. ಸ್ಪೋಟಕ ವಸ್ತುಗಳನ್ನು ಕಾಡು ಪ್ರಾಣಿಗಳು ಬೇರೆಡೆಗೆ ಕಚ್ಚಿಕೊಂಡು ಹೋಗಿ ಸಾರ್ವಜನಿಕರಿಗೆ ಅಪಾಯ ಆಗುವುದನ್ನು ಅರಿತ ಜಯಕುಮಾರ್, ಅವುಗಳನ್ನು ತನ್ನ ಮನೆಯ ಅಂಗಳದ ಮೂಲೆಯಲ್ಲಿಟ್ಟು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರೆನೇಡ್ ಸ್ಫೋಟಗಳನ್ನು ಯಾರೋ ದುಷ್ಕರ್ಮಿಗಳು ಜನರು ಸಂಚರಿಸುವ ದಾರಿಯ ಬದಿಯಲ್ಲಿ ಹಾಕಿದ್ದು ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯಕುಮಾರ್ ದೂರು ನೀಡಿದ್ದಾರೆ.
ಈ ಬಗ್ಗೆ ಎಸ್ಪಿ ಋಷಿಕುಮಾರ್ ಸೋನವಾಣೆ ಬಳಿ ಮಾಹಿತಿ ಕೇಳಿದಾಗ, ಅವು ಹ್ಯಾಂಡ್ ಗ್ರೆನೇಡ್ ಎಂಬುದಾಗಿ ಹೇಳಿದ್ದಾರೆ. ತುಕ್ಕು ಹಿಡಿದಿದ್ದು ಹಲವಾರು ವರ್ಷಗಳ ಹಿಂದಿನದ್ದಾಗಿರುವ ಸಾಧ್ಯತೆಯಿದೆ. ಯುದ್ಧ ಸಂದರ್ಭದಲ್ಲಿ ಇದನ್ನು ಬಳಸಲಾಗುತ್ತದೆ. ಕಾಶ್ಮೀರದಲ್ಲಿ ಉಗ್ರರು ಕೂಡ ಇದನ್ನು ಯೋಧರ ವಿರುದ್ಧ ಬಳಕೆ ಮಾಡುತ್ತಾರೆ. ಗ್ರೆನೇಡ್ ಉಪ್ಪಿನಂಗಡಿಗೆ ಹೇಗೆ ಬಂತೆಂಬುದನ್ನು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
In a curious incident, five grenades were found placed near a wire fence at Ilanthila of the taluk. A case is filed in this regard by Jayakumar Poojary (66), who noticed the grenades. According to the details, the complainant Jayakumar was walking towards his house from Uppinangady at around 6 pm on Saturday, November 6, when he noticed five things resembling grenades kept near the left hand side of the wire fence that is located on a downward slope area.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm