ಬ್ರೇಕಿಂಗ್ ನ್ಯೂಸ್
10-11-21 10:58 pm H.K, Bengaluru Desk ಕ್ರೈಂ
ರಾಮನಗರ, ನ 10: ಮನೆಯಲ್ಲಿ ವಾಮಾಚಾರ ಮಾಡಿದರೆ ನಿಧಿ ಸಿಗುತ್ತದೆ ಎಂದು ಹೇಳಿ ಯಾಮಾರಿಸಿ ಮಹಿಳೆಯೊಬ್ಬಳನ್ನು ಬೆತ್ತಲೆ ಮಾಡಿ ಪೂಜೆ ಮಾಡುತ್ತಿದ್ದ ಅನ್ಯರಾಜ್ಯದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವರನ್ನು ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ನಂಬಿಸಿ ವಾಮಾಚಾರ ಮಾಡುತ್ತಿದ್ದ ತಮಿಳುನಾಡು ಮೂಲದ ಆರು ಆರೋಪಿಗಳನ್ನು ಸಾತನೂರು ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಮಂಗಳವಾರ ತಡರಾತ್ರಿ ಶ್ರೀನಿವಾಸ್‌ರವರ ನೂರು ವರ್ಷಗಳಷ್ಟು ಹಳೆಯ ಮನೆಯಲ್ಲಿ ಮಹಿಳೆ ಒಬ್ಬಳನ್ನು ಬೆತ್ತಲು ಮಾಡಿ ವಾಮಾಚಾರದಲ್ಲಿ ತೊಡಗಿದ್ದ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ಮಾಡಿದ ಸಾತನೂತು ಪೊಲೀಸರು, ತಮಿಳುನಾಡು ಮೂಲದ ಪ್ರಮುಖ ಆರೋಪಿ ಪಾರ್ಥಸಾರಥಿ, ಮೇಸ್ತ್ರಿ ನಾಗರಾಜು, ಗುರೂಜಿ ಶಶಿಕುಮಾರ್, ಆತನ ಶಿಷ್ಯ ಮೋಹನ್ ಲಕ್ಷ್ಮಿನರಸಪ್ಪ ಹಾಗೂ ಲೋಕೇಶ್ ಎಂಬುವವರನ್ನು ಬಂಧಿಸಿದ್ದಾರೆ.
ಭೂಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬಾತ ವ್ಯವಹಾರದಲ್ಲಿ ಸಾಕಷ್ಟು ನಷ್ಟ ಹೊಂದಿದ್ದ. ಇರೋಬರೋ ಜಮೀನನ್ನು ಕೂಡ ಮಾರಾಟ ಮಾಡಿದ್ದ. ಹೀಗಾಗಿ ಕಳೆದ ಆರು ತಿಂಗಳಿಂದ ಸಾಕಷ್ಟು ಪರದಾಟ ನಡೆಸುತ್ತಿದ್ದ. ಸಾಕಷ್ಟು ನಷ್ಟ ಹೊಂದಿದ್ದ ಶ್ರೀನಿವಾಸನಿಗೆ ಶ್ರೀರಂಗಪಟ್ಟಣದಲ್ಲಿ ತಮಿಳುನಾಡು ಮೂಲದ ಪಾರ್ಥಸಾರಥಿ ಎಂಬುವವನು ಪರಿಚಯವಾಗುತ್ತಾನೆ. ಅವನ ಬಳಿ ತನ್ನ ಕಷ್ಟಗಳನ್ನು ಶ್ರೀನಿವಾಸ್ ಹೇಳಿಕೊಳ್ಳುತ್ತಾನೆ. ಪಾರ್ಥಸಾರಥಿ ನನಗೆ ತಮಿಳುನಾಡಿನಲ್ಲಿ ಗುರೂಜಿ ಒಬ್ಬರು ಪರಿಚಯವೆಂದು ಹೇಳಿ ಭೇಟಿ ಮಾಡಿಸುತ್ತಾನೆ. ಈ ವೇಳೆ ತಮಿಳುನಾಡು ಮೂಲದ ಶಶಿಕುಮಾರ್ ಎಂಬ ಗುರೂಜಿ ಭೇಟಿ ಮಾಡಿಸಿದ್ದಾನೆ. ಮಾಂತ್ರಿಕ ಶಶಿಕುಮಾರ್ ನಿನ್ನ ಮನೆಯಲ್ಲಿ ನಿಧಿ ಇದೆ. ಹೀಗಾಗಿ ನಿನಗೆ ಸಮಸ್ಯೆಗಳು ಆಗುತ್ತಿವೆ. ಪೂಜೆ ಮಾಡಿ ನಿಧಿ ಹೊರ ತೆಗೆದರೆ ನಿಮ್ಮ ಸಮಸ್ಯೆ ಪರಿಹಾರವಾಗುತ್ತದೆ ಎಂದು ತಿಳಿಸಿದ್ದಾನೆ.
ಇನ್ನು ಮಾಟಗಾರನ ಮಾತಿನಂತೆ ಶ್ರೀನಿವಾಸ್ ಮನೆಯಲ್ಲಿ ಇದೇ ತಿಂಗಳ 2ರಂದು ಅಮಾವಾಸೆ ದಿನ ಕೂಡ ಪೂಜೆ ಮಾಡುತ್ತಾರೆ. ಆದರೆ ಪೂಜೆ ಯಶಸ್ವಿ ಆಗುವುದಿಲ್ಲ. ಮತ್ತೆ ಮುಂದಿನ ಮಂಗಳವಾರ ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿ ನಿಲ್ಲಿಸಿ, ಮನೆಯಲ್ಲಿ ಗುಂಡಿ ತೆಗೆದು ಪೂಜೆ ಮಾಡಿದರೆ ನಿಧಿ ಸಿಗುತ್ತದೆ ಎಂದು ಸಲಹೆ ನೀಡುತ್ತಾನೆ.
ಅದರಂತೆ ನೆನ್ನೆ ರಾತ್ರಿ ಕೂಡ ಮನೆಯಲ್ಲಿ ಬೆಂಗಳೂರಿನ ಕೆಂಗೇರಿ ಮೂಲದ ಕೂಲಿ ಕೆಲಸ ಮಾಡುವ ಮಹಿಳೆಯನ್ನು 50 ಸಾವಿರ ನೀಡುವ ಆಸೆ ತೋರಿಸಿ ಕರೆದುಕೊಂಡು ಬಂದು ಬೆತ್ತಲೆ ಮಾಡಿ ಪೂಜೆ ಸಹ ಮಾಡಿದ್ದಾರೆ. ಆ ಮಹಿಳೆ ತನ್ನ ಆರು ವರ್ಷ ಮಗುವನ್ನು ಸಹ ಜೊತೆಗೆ ಕರೆದುಕೊಂಡು ಬಂದಿದ್ದಳು. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.
ಮಹಿಳೆಯಿಂದ ದೂರು ಪಡೆದು ಆರೋಪಿಗಳ ವಿರುದ್ಧ ವಾಮಚಾರ ವಿರೋಧಿ ಕಾಯ್ದೆ 2917, IPC 420, 120B ಮತ್ತು149 ಕಾಯ್ದೆ ಅನ್ವಯ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್ ತಿಳಿಸಿದರು.
Ramanagara Woman made naked to perfom black magic rituals in which six from Tamil Nadu have been arrested by Karnataka Police.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm