ಬ್ರೇಕಿಂಗ್ ನ್ಯೂಸ್
16-11-21 10:31 pm Bengaluru Correspondent ಕ್ರೈಂ
ಬೆಂಗಳೂರು, ನ.16: ಬಿಜೆಪಿ ನಾಯಕರ ನಿಕಟವರ್ತಿ, ಆರೆಸ್ಸೆಸ್ ನಾಯಕ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಯುವರಾಜ ಸ್ವಾಮಿಗೆ ಸರ್ಕಾರದ ವಿವಿಧ ಹುದ್ದೆಗಳನ್ನು ಪಡೆಯುವುದಕ್ಕಾಗಿ ಲಂಚ ನೀಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಧ್ಯಕ್ಷ ಹುದ್ದೆ ಪಡೆಯಲು ರೂ. 1 ಕೋಟಿ ಲಂಚ ನೀಡಿದ್ದ ಆರೋಪದ ಮೇಲೆ ಎಚ್.ಎಸ್.ಆರ್. ಬಡಾವಣೆ ನಿವಾಸಿ ಸುಧೀಂದ್ರ ರೆಡ್ಡಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅದೇ ರೀತಿ, ತನ್ನ ಅಳಿಯನಿಗೆ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದಲ್ಲಿ (ಕೆಎಂಎಫ್) ಹುದ್ದೆ ಪಡೆಯುವುದಕ್ಕಾಗಿ ರೂ. 30 ಲಕ್ಷ ನೀಡಿದ್ದ ಕಮಲಾನಗರ ನಿವಾಸಿ ಗೋವಿಂದಯ್ಯ ಮತ್ತು ಮಗನಿಗೆ ಬಿಬಿಎಂಪಿಯಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಹುದ್ದೆ ಪಡೆಯುವುದಕ್ಕಾಗಿ ರೂ. 30 ಲಕ್ಷ ನೀಡಿದ್ದ ಆರೋಪದ ಮೇಲೆ ರಾಜಾಜಿನಗರ ನಿವಾಸಿ ಡಾ.ಜಿ. ನರಸಿಂಹಸ್ವಾಮಿ ಎಂಬವರ ವಿರುದ್ಧ ಎಸಿಬಿ ಪ್ರಕರಣಗಳನ್ನು ದಾಖಲಿಸಿದೆ.
ಯುವರಾಜ ಸ್ವಾಮಿ ಹಣ ಪಡೆದು ವಂಚಿಸಿರುವುದಾಗಿ ಇವರು ಈ ಹಿಂದೆ ಜ್ಞಾನಭಾರತಿ, ಅನ್ನಪೂರ್ಣೇಶ್ವರಿ ನಗರ ಮತ್ತು ಸೈಬರ್ ಅಪರಾಧ ಪೊಲೀಸ್ ಠಾಣೆಗಳಿಗೆ ದೂರು ನೀಡಿದ್ದರು. ಅಲ್ಲಿನ ಪೊಲೀಸರು ತನಿಖೆ ನಡೆಸಿ ಯುವರಾಜ ಸ್ವಾಮಿಯನ್ನು ಬಂಧಿಸಿ ಆತನ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.
ಇದೇ ಪ್ರಕರಣದಲ್ಲಿ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಆರ್. ಅಯ್ಯರ್ ಅಕ್ಟೋಬರ್ 8ರಂದು ಎಸಿಬಿಗೆ ದೂರು ನೀಡಿದ್ದು ಲಂಚ ನೀಡುವುದೂ ಅಪರಾಧ ಆಗಿರುವುದರಿಂದ ಹಣದ ಮೂಲಗಳ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಲಂಚ ನೀಡಿರುವ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರಿದ್ದರು. ನವೆಂಬರ್ 8ರಂದು ಎಸಿಬಿ ಅಧಿಕಾರಿಗಳು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
ಯುವರಾಜ ಸ್ವಾಮಿಗೆ ಲಂಚ ನೀಡಿದ್ದ ಆರೋಪದ ಮೇಲೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಇಂದ್ರಕಲಾ ಮತ್ತು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮುಖಂಡ ಎಂದು ಗುರುತಿಸಿಕೊಂಡಿರುವ ವಿನಿತ್ ಕುಮಾರ್ ಎಂ.ಸಿ. ಎಂಬವರ ವಿರುದ್ಧವೂ ಎಸಿಬಿಗೆ ದೂರು ನೀಡಲಾಗಿತ್ತು. ಅವರ ವಿರುದ್ಧ ಇನ್ನೂ ಪ್ರಕರಣ ದಾಖಲು ಮಾಡಿಲ್ಲ.
Yuvaraj Swamy case ACB files case against those that bribed for post of KSRTC and KMF
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm