ಬ್ರೇಕಿಂಗ್ ನ್ಯೂಸ್
26-11-21 03:23 pm HK news Desk ಕ್ರೈಂ
ಲಕ್ನೋ, ನ.26: ದಲಿತ ಸಮುದಾಯಕ್ಕೆ ಸೇರಿದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಆಕೆ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ನಡೆದಿದೆ.
16 ವರ್ಷದ ಬಾಲಕಿ ಮತ್ತು ಆಕೆಯ ತಮ್ಮ ಹತ್ತು ವರ್ಷದ ಬಾಲಕ, ತಂದೆ ಮತ್ತು ತಾಯಿ ಎಲ್ಲರೂ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸಂಬಂಧಿಕರ ಪ್ರಕಾರ, ನೆರೆಮನೆಯ ಮೇಲ್ವರ್ಗದ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ.

ಕೊಲೆಗೂ ಮುನ್ನ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನುವ ಆರೋಪ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ಬಾಲಕಿಯ ಶವ ಮನೆಯ ಕೋಣೆಯಲ್ಲಿದ್ದರೆ, ಬಾಲಕ ಮತ್ತು ಹೆತ್ತವರ ಶವಗಳು ಮನೆಯ ಹೊರಭಾಗದಲ್ಲಿ ಬಿದ್ದುಕೊಂಡಿತ್ತು. ಪೊಲೀಸರು ಘಟನೆ ಬಗ್ಗೆ ಮರ್ಡರ್ ಮತ್ತು ಗ್ಯಾಂಗ್ ರೇಪ್ ಕಾಯ್ದೆಯಡಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಪೈಕಿ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಮನೆಯಲ್ಲಿ ನಾಲ್ವರು ಶವವಾಗಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಹರಿತ ಆಯುಧಗಳಿಂದ ಕಡಿದು ಕೊಲೆಗೈದ ರೀತಿ ಇತ್ತು. ನೆರೆಮನೆಯವರು ಮತ್ತು ಸಂತ್ರಸ್ತದ ಕುಟುಂಬದ ನಡುವೆ ಜಾಗದ ವಿಚಾರದಲ್ಲಿ ತಕರಾರು ಇತ್ತು. ಈ ಬಗ್ಗೆ ಕಳೆದ ಸೆಪ್ಟಂಬರ್ ತಿಂಗಳಲ್ಲೂ ಇದೇ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿತ್ತು. ಆನಂತರ ಪೊಲೀಸರು ರಾಜಿ ಪಂಚಾಯಿತಿ ಮೂಲಕ ವಿವಾದ ಬಗೆಹರಿಸಿದ್ದರು.
ಪೊಲೀಸರು ಆರೋಪಿಗಳ ಪರವಾಗಿಯೇ ಇದ್ದಾರೆ. ಕಳೆದ ಬಾರಿ ಹಲ್ಲೆ ಆದಾಗಲೂ ಎಫ್ಐಆರ್ ದಾಖಲು ಮಾಡಿರಲಿಲ್ಲ. ಈಗಲೂ ಪೊಲೀಸರು ರಾಜಿಯಲ್ಲಿ ಪ್ರಕರಣ ಮುಗಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತ ಕುಟುಂಬದ ಸಂಬಂಧಿಕರು ಆರೋಪಿಸಿದ್ದಾರೆ. ಸಂತ್ರಸ್ತ ಕುಟುಂಬದ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಚುನಾವಣೆ ಎದುರಿಸುವ ರಾಜ್ಯದಲ್ಲಿ ಮತ್ತೆ ಕಾನೂನು ಸುವ್ಯವಸ್ಥೆಯ ಪ್ರಶ್ನೆ ಎತ್ತಿದ್ದಾರೆ.
Four members of a family in Uttar Pradesh's Prayagraj, including a 16-year-old girl and a 10-year-old boy, were found murdered at their home on Thursday morning. Relatives of the family, which belongs to a Scheduled Caste, have claimed the girl could have been raped before her death, and they have accused a neighbouring family, which belongs to the so-called "upper caste", of the crime.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am