ಬ್ರೇಕಿಂಗ್ ನ್ಯೂಸ್
27-11-21 10:26 pm Mangaluru correspondent ಕ್ರೈಂ
ಮಂಗಳೂರು, ನ.27: ಕಡೆಗೂ ಕಾಮುಕ ವೈದ್ಯ ಡಾ.ರತ್ನಾಕರನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕುಷ್ಠರೋಗ ನಿವಾರಣಾ ಘಟಕದ ಅಧಿಕಾರಿಯಾಗಿರುವ ಡಾ.ರತ್ನಾಕರ್, ಸಹೋದ್ಯೋಗಿ ಮಹಿಳಾ ಸಿಬಂದಿ ಜೊತೆ ಚಕ್ಕಂದ ಆಡುತ್ತಿದ್ದ ವಿಡಿಯೋ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿತ್ತು.
ಇದರ ಬೆನ್ನಲ್ಲೇ ಶುಕ್ರವಾರ ಸಂಜೆ ಆರೋಪಿ ರತ್ನಾಕರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಆಂತರಿಕ ತನಿಖಾ ಸಮಿತಿ ಸದಸ್ಯರು ಮತ್ತು ಮೂವರು ಮಹಿಳಾ ಸಿಬಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.


ಅಲ್ಲದೆ, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತ ಯುವತಿಯರ ಜೊತೆ ಹೊರ ಜಿಲ್ಲೆಗಳಿಗೆ ಪ್ರವಾಸ ಹೋಗಿರುವ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ತೆರಳಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಪ್ರವಾಸ ತೆರಳಿ, ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ.
ಇದರಂತೆ, ಆರೋಪಿ ರತ್ನಾಕರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎರಡು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಮಹಿಳಾ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರ ಮತ್ತು ಸಹೋದ್ಯೋಗಿಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಲಾಗಿದೆ.
Mangalore Doctor Ratnakar sexually harassed women colleagues, made them sit on lap, arrested. Photos and videos of a health official in Karnataka sexually harassing his women colleagues have gone viral on Friday, November 26. Officials said that the Karnataka Health Department had suspended Dr Ratnakar, a district level officer in Dakshina Kannada district on November 8 for inappropriate behaviour recorded earlier in August.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 02:36 pm
Mangalore Correspondent
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm